ಬೆಂಗಳೂರು ಜೂನ್ 29. ರಾಜ್ಯದಲ್ಲಿ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಯಡಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ತಲಾ ಹತ್ತು ಕೆಜಿ ಅಕ್ಕಿ ವಿತರಿಸುವ ಯೋಜನೆಯ ಅಕ್ಕಿ ಹೊಂದಿಸಲು ಸಾಧ್ಯವಾಗದೇ ಇರುವುದರಿಂದ ತಲಾ ಐದು ಕೆಜಿ ಅಕ್ಕಿ ಹಾಗೂ ಬಾಕಿ ಐದು ಕೆಜಿ ಅಕ್ಕಿ ಬದಲು ರೂ 170 ಹಣ ಫಲಾನುಭವಿ ಖಾತೆಗೆ ಜಮಾ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿ ಅಕ್ಕಿಗೆ 170 ರೂಪಾಯಿ ಪಡಿತರದಾರರಿಗೆ ಹಣ ನೀಡಲು ಜುಲೈ ತಿಂಗಳಿನಿಂದಲೇ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ತೀರ್ಮಾನ ಇದು ಎಷ್ಟರ ಮಟ್ಟಕ್ಕೆ ಯಶಸ್ವಿ ಆಗುತ್ತದೆ ಎಂದು ಕಾದು ನೋಡಬೇಕಾಗಿದೆ.