ಏ.04 ಆತ್ಮೀಯ ಓದುಗರೇ ರಾಜ್ಯಾದ್ಯಂತ ಇನ್ನೇನು ಕೆಲವೇ ದಿನಗಳಲ್ಲಿ 2023ನೇ ಸಾರ್ವತ್ರಿಕ ವಿಧಾನಸಭೆಯ ಚುನಾವಣೆ ನಡೆಯಲಿದ್ದು ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪೈಕಿ ಶೇಕಡಾ 70ರಷ್ಟು ಅಭ್ಯರ್ಥಿಗಳ ಪಟ್ಟಿ ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದೆ ಆದರೆ ಸಿಂಧನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂದು ಇನ್ನೂ ಕೂಡ ನಿಗೂಢವಾಗಿದೆ ಮತ್ತು ಎಐಸಿಸಿ ಕಮಿಟಿಗೆ ಕೂಡ ಕಗ್ಗಂಟಾಗಿ ಪರಿಣಮಿಸಿದೆ
ಮಾಜಿ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ಅವರು ರಾಜಧಾನಿ ಬೆಂಗಳೂರು ದೆಹಲಿ ಹೋಗಿ ತಮ್ಮದೇ ಆದಂತ ರಾಜಕೀಯ ವರ್ಚಸ್ ನೊಂದಿಗೆ ಹೈಕಮಾಂಡ ಮೇಲೆ ಒತ್ತಡ ಹಾಕುತ್ತಿದ್ದಾರೆ ಬಲ್ಲ ಮೂಲಗಳ ಪ್ರಕಾರ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದಾರೆ
ಅದೇ ರೀತಿ ಮಾಜಿ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಬಸವನಗೌಡ ಬಾದರ್ಲಿ ಹಿಂದೆ ಬಿದ್ದಿಲ್ಲ ಕನಕಪುರ ಬಂಡೆ ಎಂದು ಪ್ರಸಿದ್ಧಿಯಾಗಿರುವ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಹಾಗೂ ಯುವ ಕಾಂಗ್ರೆಸ್ನ ರಾಜ್ಯಾಧ್ಯಕ್ಷರಾದ ಮೊಹಮದ್ ನಲಪಾಡ್ ಹ್ಯಾರಿಸ್ ಮತ್ತು ಇನ್ನಿತರ ಮುಖಂಡರೊಂದಿಗೆ ಹೈಕಮಾಂಡ್ ಮೇಲೆ ಒತ್ತಡ ಹಾಕಿ ಅವರು ಕೂಡ ಟಿಕೆಟ್ ಗಾಗಿ ಪ್ರಯತ್ನಿಸುತ್ತಿದ್ದು ಈಗಾಗಲೇ ಸಂಭಾವ್ಯ ಆಕಾಂಕ್ಷಿಗಳ ಪಟ್ಟಿಯಲ್ಲಿ ಇಬ್ಬರ ಹೆಸರು ಬಂದಿರುವುದರಿಂದ ಅದೃಷ್ಟಲಕ್ಷ್ಮಿ ಯಾರಿಗೆ ಒಲಿಯುತ್ತಾಳೆ ಎಂದು ಕಾದು ನೋಡಬೇಕಾಗಿದೆ ಎಂಬುವುದು ಸಿಂಧನೂರು ವಿಧಾನಸಭಾ ಕ್ಷೇತ್ರದ ಜನತಾ ಜನಾರ್ದನನ ಮಾತಾಗಿದೆ