ರಾಯಚೂರು,ಏ.13 ಏ.15 ರಂದು ಮಹೀಂದ್ರಾ & ಮಹೀಂದ್ರಾ ಕಂಪನಿ ಬೆಂಗಳೂರು ವತಿಯಿಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಐಟಿಐ ಪಾಸಾದ ಮತ್ತು ಶಿಶುಕ್ಷು ತರಬೇತಿ ಮುಗಿದ ಹಾಗೂ ಡಿಪ್ಲೋಮಾ ಪಾಸಾದವರಿಗೆ ಮಹೀಂದ್ರಾ ಕಂಪನಿಯಲ್ಲಿ ಉದ್ಯೋಗ ನಿಡಲು ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಎಸ್,ಎಸ್,ಎಲ್,ಸಿ, ಅಂಕಪಟ್ಟಿ, ಐಟಿಐ ಪಾಸಾದ, ಶಿಶುಕ್ಷು ತರಬೇತಿ ಪೂರ್ಣಗೊಂಡ ಹಾಗೂ ಡಿಪ್ಲೋಮಾ ಪಾಸಾದ ಅಂಕಪಟ್ಟಿ ಹಾಗೂ ಗುರುತಿನ ಚೀಟಿ ಸೇರಿದಂತೆ ಇನ್ನಿತರ ದಾಖಲಾತಿಗಳೊಂದಿಗೆ ಏ.15 ರಂದು ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರಾಯಚೂರು ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಗೆ ದೂ.ಸಂ: 08532-200940 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.