ರಾಯಚೂರು,ಏ.13 ಜಿಲ್ಲಾಧಿಕಾರಿಗಳ ಕಾರ್ಯಾಲಯ ರಾಯಚೂರು ಜಿಲ್ಲೆಯಲ್ಲಿ ಸ್ಥಾಪಿಸಲಾದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ತಾಂತ್ರಿಕ ಕೋಶದ ಬಲವರ್ಧನೆ ಮತ್ತು ಮಂಡಳಿಯ ಯೋಜನೆಗಳ ಪರಿಣಾತ್ಮಕ ಅನುಷ್ಠಾನಕ್ಕಾಗಿ ತಾಂತ್ರಿಕ ಅಧಿಕಾರಿ, ತಾಂತ್ರಿಕ ಸಹಾಯಕ, ಲೆಕ್ಕ ವ್ಯವಸ್ಥಾಪಕ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ಮಾಡಲಾಗಿದ್ದು,
ಜಿಲ್ಲೆಯಲ್ಲಿ ಮಾ.29ರಿಂದ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆ -2023 ಮಾದರಿ ನೀತಿ ಸಂಹಿತೆ ಮುಗಿಯುವವರೆಗೂ ಜಿಲ್ಲಾಧಿಕಾರಿಗಳ ಕಾರ್ಯಾಲಯ ರಾಯಚೂರು ಜಿಲ್ಲೆಯಲ್ಲಿ ಸ್ಥಾಪಿಸಲಾದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ತಾಂತ್ರಿಕ ಕೋಶದಲ್ಲಿ ಗುತ್ತಿಗೆ ಆಧಾರದ ಮೇಲೆ ಸಿಬ್ಬಂಧಿಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆಯ ತಾಂತ್ರಿಕ ಕೋಶದ ( ಗುತ್ತಿಗೆ ಆಧಾರ) ನೇಮಕಾತಿ ಸಮಿತಿಯ ಅಧ್ಯಕ್ಷರೂ ಹಾಗೂ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.