ರಾಯಚೂರು,ಏ.13(ಕವಾ):- 18 ವರ್ಷ ಮೇಲ್ಪಟ್ಟ ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡುವ ಮೂಲಕ ದೇಶವನ್ನು ಮುನ್ನಡೆಸಬೇಕು ಅದರಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನು ನಿರ್ಮಿಸಬೇಕು. ಎಂದು ಎನ್.ಆರ್.ಎಲ್.ಎಮ್ ಜಿಲ್ಲಾ ವ್ಯವಸ್ಥಾಪಕ ವಿಜಯ ಕುಮಾರ್ ಅವರು ಹೇಳಿದರು.
ಅವರು ಏ.13ರ(ಬುಧವಾರ)ದಂದು ತಾಲೂಕಿನ ಮನ್ಸಲಾಪೂರು ಗ್ರಾಮ ಪಂಚಾಯತಿಯ ಹೊಸಪೇಟೆ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ವತಿಯಿಂದ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಕ್ಕುಗಳಿಗಾಗಿ ಹೋರಾಟ ಮಾಡುವ ನಾವು, ಮತದಾನದ ಕರ್ತವ್ಯ ಮರೆಯುತ್ತಿದ್ದೇವೆ. ಯಾವುದೇ ಆಸೆ-ಆಮಿಷಗಳಿಗೆ ಮತವನ್ನು ಮಾರಾಟ ಮಾಡಿದರೆ, ನಮ್ಮತನವನ್ನು ಮಾರಾಟ ಮಾಡಿದಂತಾಗುತ್ತದೆ’ ಎಂದು ತಿಳಿಸಿದರು.
ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರನಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳ ಮತ್ತು ಮುಕ್ತ ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆ ಘನತೆಯನ್ನು ಎತ್ತಿ ಹಿಡಿಯುತ್ತೇವೆ ಎಂದು ಚುನಾವಣೆಯಲ್ಲಿ ನಿರ್ಭಿತರಾಗಿ ಮತ್ತು ಧರ್ಮ ಜಾತಿ ಜನಾಂಗ ಮತ ಭಾμÉ ಯಾವುದೇ ಪ್ರೇರಣೆಗಳ ಪ್ರಭಾವಿತರಾಗಿದ ಮತ ಚಲಾಯಿಸುತ್ತಿದೆ ಎಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು.
ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಅನ್ನಪೂರ್ಣ, ಶ್ರಾವಣಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷ ಲಲಿತಾ ಹಾಗೂ ತಾಲೂಕ ಕಾರ್ಯಕ್ರಮ ವ್ಯವಸ್ಥಪಕರಾದ ನವೀನ್ ಕುಮಾರ್ ಅವರು ಉಪಸ್ಥಿತರಿದ್ದರು.