ರಾಯಚೂರು,ಏ.16(ಕವಾ):- ವಿಧಾನಸಭೆ ಚುನಾವಣೆ-2023ರ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವ ಕಾರಣ ಜಿಲ್ಲೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳು ಮತ್ತು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಲ್ಲಿ 8 ದೂರು ಮೇಲ್ವಿಚಾರಣೆ ಕೋಶವನ್ನು ರಚಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಪಟ್ಟ ಇತರೆ ದೂರುಗಳು, ಕುಂದುಕೊರತೆಗಳು ಇದ್ದಲ್ಲಿ ಸಾರ್ವಜನಿಕರು ಜಿಲ್ಲಾ ಕೇಂದ್ರದ ಉಚಿತ ಸಹಾಯವಾಣಿ ಸಂಖ್ಯೆ 1950, 1077, 08532-228551, 226383, 53-ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸಹಾಯವಾಣಿ ಸಂಖ್ಯೆ 08532-200772, 54-ರಾಯಚೂರು ನಗರವಿಧಾನಸಭಾ ಕ್ಷೇತ್ರದ ಸಹಾಯವಾಣಿ 08532-225630, 55-ಮಾನವಿ ವಿಧಾನಸಭಾ ಕ್ಷೇತ್ರದ ಸಹಾಯವಾಣಿ 08538-220839, 56-ದೇವದುರ್ಗ ವಿಧಾನಸಭಾ ಕ್ಷೇತ್ರದ ಸಹಾಯವಾಣಿ ಸಂಖ್ಯೆ: 08531-260117, 57- ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಸಹಾಯವಾಣಿ 08537-257525, 58- ಸಿಂಧನೂರು ವಿಧಾನಸಭಾ ಕ್ಷೇತ್ರದ ಸಹಾಯವಾಣಿ 08535-220151 ಹಾಗೂ 59- ಮಸ್ಕಿ ವಿಧಾನಸಭಾ ಕ್ಷೇತ್ರ ಸಹಾಯವಾಣಿ 08537-297525 ಸಂಖ್ಯೆಗೆ ಸಂಪರ್ಕಿಸಬಹುದೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.