ಏಪ್ರಿಲ್ 19 ರಾಜ್ಯದ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದರ ಜೊತೆಯಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ಜೆಡಿಎಸ್ ಪಕ್ಷದಿಂದ ಬಿಜೆಪಿಗೆ ಪಕ್ಷಕ್ಕೆ ಸೇರ್ಪಡೆಯ ಕೂಡ ಅಷ್ಟೇ ಅದ್ದೂರಿಯಾಗಿ ನಡೆಯುತ್ತಿದೆ.
ಸಿಂಧನೂರಿನಲ್ಲಿ ಇತ್ತೀಚಿಗಷ್ಟೇ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿ ಸಿಂಧನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಕೆ ಕರಿಯಪ್ಪ ಅವರ ನಾಯಕತ್ವವನ್ನು ಮೆಚ್ಚಿ ಜೆಡಿಎಸ್ ಪಕ್ಷದ ಕಟ್ಟ ಅಭಿಮಾನಿಗಳಾದ ಆನಂದ ಗೊರೇಬಾಳ ಮತ್ತು ಅವರ ಗೆಳೆಯರ ಬಳಗ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ,ಶಿವನಗೌಡ ನಾಯಕ್,ಅಮರೇಶ ನಾಯಕ . ಕೆ.ಕರಿಯಪ್ಪ ಮತ್ತು ಕೆ ಮರಿಯಪ್ಪ ಇವರ ಸಮ್ಮುಖದಲ್ಲಿ ಅಧಿಕೃತವಾಗಿ ಸೇರ್ಪಡೆಯಾದರು.
ನಂತರ ಎಪಿಎಂಸಿ ಗಣೇಶ ಗುಡಿಯಿಂದ ಡೊಳ್ಳು ಕುಣಿತ ಕಲಾತಂಡಗಳ ಮುಖಾಂತರ ವಿಜೃಂಭಣೆಯಿಂದ ಬಿಜೆಪಿ ಪಕ್ಷದ ಸಾವಿರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಕಾಲಿನಡಿಗೆಯಿಂದ ತಹಸಿಲ್ ಕಛೇರಿಗೆ ಬಂದು ನಾಮಪತ್ರ ಸಲ್ಲಿಸಿದರು.