ರಾಯಚೂರು,ಏ.20(ಕವಾ):- ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ನಗರ ಸಭೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಏ.24 ರಂದು ಬೆಳಿಗ್ಗೆ 09:00 ಗಂಟೆಗೆ ನಗರದ ಬಸವೇಶ್ವರ ವೃತ್ತದಲ್ಲಿ, ಶ್ರೀ ಬಸÀವೇಶ್ವರ ಜಯಂತಿಯನ್ನು ಆಚರಿಸಬೇಕಾಗಿರುತ್ತದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.