ರಾಯಚೂರು,ಮೇ ೩೧ ಜೂ.೦೧ರಿಂದ ಜೂ.೩೦ರವರೆಗೆ ಸತತ ಒಮದು ತಿಂಗಳುಗಳ ಕಾಲ ರಾಷ್ಟಿçÃಯ ಮಕ್ಕಳ ಹಕ್ಕುಗಳ ಆಯೋಗದಿಂದ ವಿಶ್ವ ಬಾಲಕಾಮಿಕ ಪದ್ದತಿ ವಿರೋಧಿ ದಿನದಂಗವಾಗಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಬಾಲ ಕಾರ್ಮಿಕ ನಿರ್ಮೂಲನಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಬಾಲ ಕಾರ್ಮಿಕತೆ ನಿರ್ಮೂಲನೆ ಮಾಡಲು ಪ್ರತಿಯೊಂದು ಇಲಾಕೆಯ ಅಧಿಕಾರಿಗಳು ಜವಾಬ್ದಾರಿಯುವಾಗಿ ಕಾರ್ಯನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಮೇ ೩೧ರ(ಬುಧವಾರ) ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳಗೆ ಶಿಕ್ಷಣವನ್ನು ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳನ್ನು ಕಾರ್ಮಿಕರಂತೆ ಬಳಸಿಕೊಳ್ಳುತ್ತಿದ್ದು, ಇದು ಅಕ್ಷಮ್ಯ ಅಪರಾದವಾಗಿದೆ. ಮಕ್ಕಳ ಹಕ್ಕುಗಳಲ್ಲಿ ಶಿಕ್ಷಣದ ಹಕ್ಕು ಪ್ರಮುಖ ಪಾತ್ರವನ್ನು ವಹಿಸುತ್ತದೆ ಆದ್ದರಿಂದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಇದೀಗ ಮುಂಗಾರು ಆರಂಭವಾಗುತ್ತಿದ್ದು, ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಹೊಲಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತವೆ ಆದ್ದರಿಂದ ಸಂಬAಧಪಟ್ಟ ಇಲಾಖೆಗಳು ಮಕ್ಕಳನ್ನು ಯಾವುದೇ ಕೆಲಸಕ್ಕೆ ಬಳಸಿಕೊಳ್ಳದಂತೆ ಸೂಕ್ರ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೂ.೧೨ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಬಾಲ ಕಾರ್ಮಿಕತೆ ಎಂಬ ಅನಿಷ್ಟ ಪದ್ದತಿಯನ್ನು ಹೋಗಲಾಡಿಸಲು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮತ್ತು ಬಾಲ ಕಾಮಿಕ ಪದ್ದತಿ ಅನುಸರಿಸುವ ಪ್ರದೇಶಗಳಲ್ಲಿ ದಾಳಿಗಳನ್ನು ನಡೆಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಮಂಜುನಾಥ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತೆದಾರ, ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ, ಪ್ರದೇಶಿಕ ಸಾರಿಗೆ ಇಲಾಖೆಯ ಅಧಿಕಾರಿ ವಿನಯಾ.ಕೆ, ಶಿಕ್ಷಣ ಇಲಾಖೆಯ ಅಧಿಕಾರಿ ಪರಶುರಾಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದ
ರು.