ರಾಯಚೂರು,ಜೂ.19. ಜಿಲ್ಲೆಯಲ್ಲಿ ಸರ್ಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಮತ್ತು ಹೆಚ್ಚಿನ ಕಾಳಜಿಯಿಂದ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ನಿಸ್ವಾರ್ಥ ಮನೋಭಾವನೆಯಿಂದ ಕಾರ್ಯನಿರ್ವಹಿಸಬೇಕೆಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಜೂ.೧೯ರ(ಸೋಮವಾರ)ದಂದು ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತ್ರೆಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಅಕ್ರಮ ಮರುಳು ದಂದೆ, ಮಟಕಾ, ಜೂಜಾಟದಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಿ ಕಾರ್ಯನಿರ್ವಹಿಸಬೇಕು. ಯಾವುದೇ ಆಮೀಶಕ್ಕೊಳಗಾಗದೇ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿನ ರೈತರಿಗೆ ವಿತರಿಸಲಾಗುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಮರ್ಪಕವಾಗಿ ಒದಗಿಸಬೆಕು ಹಾಗೂ ಕಳಪೆ ಬಿತ್ತನೆ ಬೀಜ ಮಾರಾಟ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಿ ಕಳಪೆ ಬೀಜ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಕಳಪೆ ಬಿತ್ತನೆ ಬೀಜಗಳ ಬಗ್ಗೆ ದೂರುಗಳು ಬಂದಾಗ ಅಂತಹ ಬೀಜಗಳನ್ನು ಪರೀಕ್ಷೆಗೆ ಒಳಪಡಿಸಿ ವರದಿಯಾದರಿಸಿ ಕ್ರಮ ಕೈಗೊಲ್ಳುವಂತೆ ಸೂಚಿಸಿದರು.
ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕ್ರಿಮಿನಾಶಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಕಡ್ಡಾಯವಾಗಿ ಲಭ್ಯವಿರುವ ದಾಸ್ತಾನು, ಹಾಗೂ ಬೆಲೆಗಳ ಬಗ್ಗೆ ಮಾಹಿತಿ ಇರುವ ಫಲಕಗಳನ್ನು ಪ್ರದರ್ಶಿಸುವಂತೆ ಎಲ್ಲಾ ಅಂಗಡಿಗಳಿಗೆ ಸೂಕ್ರ ನಿರ್ದೇಶನ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ೩೭ ರೈತ ಸಂಪರ್ಕ ಕೇಂದ್ರಗಳಿಂದ ಮುಂಗಾರು ಹಂಗಾಮಿನಲ್ಲಿ ಭತ್ತ, ತೊಗರಿ, ಸಜ್ಜೆ ಹೆಸರು, ಮೆಕ್ಕೆಜೋಳ, ಹಾಗೂ ಸೂರ್ಯಕಾಂತಿ ಬೆಳೆಗಳ ಬಿತ್ತನೆ ಬೀಜಗಳನ್ನು ೨,೩೬೦.೯೪ ಕ್ವಿಂಟಾಲ್ ಬೀಜಗಳನ್ನು ದಾಸ್ತಾನು ಮಾಡಿ, ೮೧೫.೦೪ ಕ್ವಿಂಟಾಲ್ ಬೀಜಗಳನ್ನು ರೈತರಿಗೆ ರಿಯಾಯತಿ ದರದಲ್ಲಿ ವಿತರಣೆ ಮಾಡಲಾಗಿದ್ದು, ಹಿಂಗಾರು ಹಂಗಾಮಿನಲ್ಲಿ ಕಡಲೆ, ಜೋಳ, ಹಾಗೂ ನೆಲಗಡಲೆ ಬಿತ್ತನೆ ಬೀಜಗಳನ್ನು ರೈತರಿಗೆ ರಿಯಾಯತಿ ದರದಲ್ಲಿ ವಿತರಣೆ ಮಾಡಲಾಗುವುದು ಎಂಬ ಮಾಹಿತಿಯನ್ನು ಕೃಷಿ ಇಲಾಖೆಯ ಅಧಿಕಾರಿಯಿಂದ ಪಡೆದುಕೊಂಡರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿಯಾಗಿದ್ದು, ಈ ಕಾರ್ಯದಲ್ಲಿ ಯಾವೊಬ್ಬ ಅಧಿಕಾರಿಯು ಬೇಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಅಂತಹ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆಯಿಮದ ಕುಡಿಯುವ ನಿರು ಸರಿಯಾಗಿ ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳು ಬಂದಿದ್ದು, ಕೂಡಲೇ ಅಧಿಕಾರಿಗಳು ಅಂತಹ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದರು.
ನಗರದ ಹೊರವಲಯದ ರಾಸಾಯನಿಕ ಫ್ಯಾಕ್ಟರಿಗಳಿಂದ ರಾಸಯನಿಕ ತ್ಯಾಜ್ಯವನ್ನು ಗ್ರಾಮೀಣ ಭಾಗದ ರೈತರ ಜಮೀನು ಮತ್ತು ಕೆರಗಳಿಗೆ ಹಾಕುತ್ತಿದ್ದು, ಇದರಿಂದ ಗ್ರಾಮೀಣ ಪ್ರದೇಶಗಳಿಗೆ ಸರಬರಾಜು ಮಾಡುವ ನಿರು ಕಲುಷಿತವಾಗುತ್ತಿದೆ ತಕ್ಷಣವೇ ಅಧಿಕಾರಿಗಳು ಅಂತಹ ಫ್ಯಾಕ್ಟರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ತೋಟಗಾರಿಕೆ ಬೆಳಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿ ಕಾರ್ಯನಿರ್ವಹಿಸಬೇಕು ರೈತರು ಕೃಷಿಯ ಜೊತೆ ಜೊತೆಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುವಂತೆ ಜನರಿಗೆ ಪ್ರೋತ್ಸಾಹಿಸಬೇಕು ಎಂದರು.
ಜಿಲ್ಲೆಯ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆಯಾಗುತ್ತಿದ್ದು, ಅಂತಹ ಗ್ರಾಮಗಳಲ್ಲಿ ಯಾವುದೇ ರೀತಿಯಾದ ವಿದ್ಯುತ್ ಸಮಸ್ಯೆಯಾಗದಂತೆ ಹಾಗೂ ವಿದ್ಯುತ್ ಪರಿವರ್ತಗಳು ಕೆಟ್ಟು ಹೋದ ಬಗ್ಗೆ ದೂರುಗಳನ್ನು ಬಂದಲ್ಲಿ ಕೂಡಲೇ ಸ್ಪಂಧಿಸಿ ಪರಿವರ್ತಕ ಬದಲು ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ , ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಭೋಸರಾಜು, ರಾಯಚೂರು ನಗರ ಶಾಸಕ ಡಾ.ಎಸ್.ಶಿವರಾಜ ಪಾಟೀಲ್, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಮಾನವಿ ಶಾಸಕ ಹಂಪಯ್ಯ ನಾಯಕ, ದೇವದುರ್ಗ ಶಾಸಕಿ ಜಿ.ಕರೆಮ್ಮ ನಾಯಕ, ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ವಿಧಾನಪರಿಷತ್ ಸದಸ್ಯ ಶರಣೇಗೌಡ ಬಯ್ಯಪೂರ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಸಿಇಓ ಶಶಿಧರ ಕುರೇರ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.