ರಾಯಚೂರು ಅ 01. ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-IIIಬಿ) ಅಭಿವೃದ್ದಿಗಾಗಿ ೨೦೨೩-೨೪ ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅ.೩೦ ರಂದು ಆಗಿರುತ್ತದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಶೈಕ್ಷಣಿಕ ಸಾಲ ಯೋಜನೆಗಳು: ಬಸವಬೆಳಗು ಯೋಜನೆ (ಈಡಿesh Sಣuಜeಟಿಣs) : ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬ ವಾರ್ಷಿಕ ಆದಾಯ ರೂ.೩.೫೦ ಲಕ್ಷಮಿತಿಯಲ್ಲಿರುವ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ ೨೮ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ ರೂ.೧.೦೦ ಲಕ್ಷಗಳಂತೆ ಕೊರ್ಸನ ಅವಧಿಗೆ ಗರಿಷ್ಠರೂ.೪.೦೦ ಲಕ್ಷಗಳಿಂದ ೫.೦೦ ಲಕ್ಷಗಳವರೆಗೆ ವಾರ್ಷಿಕ ಶೇ.೨ ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ವಿದ್ಯಾರ್ಥಿಗಳು ಅಇಖಿ/ಓಇಇಖಿ ಇತ್ಯಾದಿ ಪ್ರವೇಶಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರ್ಕಾರಿಕೋಟಾದ ಸೀಟುಪಡೆದಿರಬೇಕು.
ಬಸವಬೆಳಗು ಯೋಜನೆ ((Renewals)) : ೨೦೨೨-೨೩ ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ ೨ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.
ವಿದೇಶ ವಿದ್ಯಾವಿಕಾಸ ಯೋಜನೆ(Fresh Students)) : ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬ ವಾರ್ಷಿಕದ ಆದಾಯ ರೂ.೮.೦೦ ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳು ಕಿS Woಡಿಟಜ ಖಚಿಟಿಞiಟಿg ೫೦೦ ರೊಳಗೆ ಬರುವ ವಿದೇಶಿವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್, ಪಿಹೆಚ್ಡಿ, ಮಾಸ್ಟರ್ ಡಿಗ್ರಿ ಕೋರ್ಸ್ಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ.೧೦.೦೦ ಲಕ್ಷಗಳಂತೆ ೩ವರ್ಷದ ಅವಧಿಗೆ ಒಟ್ಟು ರೂ.೨೦.೦೦ ಲಕ್ಷಗಳನ್ನು ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.
ವಿದೇಶ ವಿದ್ಯಾವಿಕಾಸ ಯೋಜನೆ ((Renewals)) : ೨೦೨೨-೨೩ ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ ೨ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.
ಜೀವಜಲ ಯೋಜನೆ : ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.೯೮,೦೦೦/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.೧,೨೦,೦೦೦/-ಗಳ ಮಿತಿಯೊಳಗಿರುವ ಸಣ್ಣ ಮತ್ತುಅತಿ ಸಣ್ಣರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಘಟಕ ವೆಚ್ಚ ರೂ. ೪.೭೫ ಲಕ್ಷಗಳಲ್ಲಿ ರೂ. ೪.೨೫ ಲಕ್ಷಗಳು ಸಹಾಯಧನ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.೫೦,೦೦೦/- ಗಳ ಸಾಲವನ್ನು ಶೇ. ೪ ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. ಉಳಿದ ಜಿಲ್ಲೆಗಳಿಗೆ ಘಟಕ ವೆಚ್ಚರೂ. ೩.೭೫ ಲಕ್ಷಗಳಲ್ಲಿ ರೂ.೩.೨೫ ಲಕ್ಷಸಹಾಯಧನ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.೫೦,೦೦೦/- ಗಳ ಸಾಲವನ್ನು ಶೇ. ೪ ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ೧ ಎಕರೆ ಜಮೀನು ಹೊಂದಿರಬೇಕು. ಇತರೇ ಜಿಲ್ಲೆಗಳಲ್ಲಿ ಕನಿಷ್ಠ ೨ ಎಕರೆ ಹಾಗೂ ಗರಿಷ್ಠ ೫ ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಈಚಿಡಿmeಡಿʼs ಈಖUIಖಿ Iಆ ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣಪತ್ರ ಹೊಂದಿರಬೇಕು.
ಕಾಯಕಕಿರಣ ಯೋಜನೆ : ವೀರಶೈವ-ಲಿಂಗಾಯತ ಸಮುದಾಯದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಈ ಕೆಳಕಂಡAತೆ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚರೂ.೧,೦೦,೦೦೦/- ಗಳಿಗೆ ಶೇ.೨೦ರಷ್ಟು ಗರಿಷ್ಠ ರೂ.೨೦,೦೦೦/- ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.೮೦ರಷ್ಟು ಗರಿಷ್ಠ ರೂ.೮೦,೦೦೦/- ಗಳನ್ನು ವಾರ್ಷಿಕ ಶೇ.೪ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡುವುದು. ಘಟಕ ವೆಚ್ಚ ರೂ.೨,೦೦,೦೦೦/- ಗಳಿಗೆ ಶೇ.೧೫ರಷ್ಟು ಗರಿಷ್ಠ ರೂ.೩೦,೦೦೦/- ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.೮೫ರಷ್ಟು ಗರಿಷ್ಠ ರೂ.೧,೭೦,೦೦೦/- ಗಳನ್ನು ವಾರ್ಷಿಕ ಶೇ.೪ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡುವುದು.
ಭೋಜನಾಲಯ ಕೇಂದ್ರ : ವೀರಶೈವ-ಲಿಂಗಾಯತ ಸಮುದಾಯದ ಜನರು ಹೋಟೆಲ್ (ಖಾನಾವಳಿ) ಉದ್ಯಮಕೈಗೊಳ್ಳಲು ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುವುದು. ಹೋಟೆಲ್ ಉದ್ದಿಮೆಕೈಗೊಳ್ಳಲು ಘಟಕ ವೆಚ್ಚ ರೂ. ೫.೦೦ ಲಕ್ಷ ಇದರಲ್ಲಿ ರೂ.೪,೬೦,೦೦೦/- ಸಾಲ ಮತ್ತು ರೂ. ೪೦,೦೦೦/- ಸಹಾಯಧನ ನೆರವು ನೀಡಲಾಗುವುದು. ಫಲಾನುಭವಿಗಳು ತಮ್ಮ ಸ್ವಂತ ಹೆಸರಿನಲ್ಲಿ ಕನಿಷ್ಠ ೨೦*೩೦ ಅಳತೆಯುಳ್ಳ ನಿವೇಶನ ಹೊಂದಿರಬೇಕು.
ವಿಭೂತಿ ನಿರ್ಮಾಣ ಘಟಕ : ವೀರಶೈವ-ಲಿಂಗಾಯತ ಸಮುದಾಯದವರು ವಿಭೂತಿಯನ್ನು ತಯಾರಿಸುವವರಿಗೆ ಸಾಲ ಮತ್ತು ಸಹಾಯಧನ ನೀಡುವ ಯೋಜನೆ ಇದಾಗಿದೆ. ಕುಟುಂಬದ ವಾರ್ಷಿಕ ವರಮಾನ ರೂ.೩.೫೦ ಲಕ್ಷಗಳು ಮತ್ತು ೧೮ ರಿಂದ ೫೫ ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿಸಲ್ಲಿಸಬಹುದು. ವಿಭೂತಿ ನಿರ್ಮಾಣ ಘಟಕ ನಿರ್ಮಿಸಲು ಘಟಕ ವೆಚ್ಚ ರೂ. ೪.೦೦ ಲಕ್ಷ ಇದರಲ್ಲಿ ರೂ.೩,೬೦,೦೦೦/- ಸಾಲ ಮತ್ತು ರೂ. ೪೦,೦೦೦/- ಸಹಾಯಧನ ವಾರ್ಷಿಕ ಬಡ್ಡಿ ದರ ಶೇ.೩% ದರದಲ್ಲಿ ನೆರವು ನೀಡಲಾಗುವುದು.
ಸ್ವಾವಲಂಬಿ ಸಾರಥಿ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) : ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಭಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ (ಹಳದಿಬೊರ್ಡ್) ಖರೀದಿಗೆ ಪಡೆಯುವ ಸಾಲಕ್ಕೆ ಶೇ.೫೦ರಷ್ಟುಅಥವಾ ಗರಿಷ್ಠ ೩.೦೦ ಲಕ್ಷಗಳ ಸಹಾಯಧನವನ್ನುನಿಗಮದಿಂದ ಮಂಜೂರು ಮಾಡಲಾಗುವುದು. ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿ ದರದಲ್ಲಿಸಾಲ ಪಡೆಯುವುದು.
ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ): ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ/ ಕೃಷಿಅವಲಂಭಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಆರ್ಥಿಕ ಚಟುವಟಿಕೆಗಳು/ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕ್ಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ.೨೦ ರಷ್ಟು ಅಥವಾ ಗರಿಷ್ಟ ರೂ. ೧.೦೦ ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾಕೋಟಾ ಮತ್ತುನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ನಲ್ಲಿಅರ್ಜಿಯನ್ನುಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದುಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಅರ್ಹ ಫಲಾಪೇಕ್ಷಿಗಳು ಗ್ರಾಮಒನ್/ ಬೆಂಗಳೂರುಒನ್/ ಕರ್ನಾಟಕಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ hಣಣಠಿs://ಞvಟಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ನಿಗಮದ ದೂ.ಸಂ: ೦೮೦-೨೨೮೬೫೫೨೨/೯೯೦೦೦೧೨೩೫೧ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ನಂ: ೧-೧-೧೫೮, ಉದಯನಗರ, ಕರ್ನಾಟಕ ಗ್ರಾಮೀಣ ಬ್ಯಾಂಕ ಹಿಂಭಾಗ, ಉಮಾ ಹೋಟೆಲ್ ಹತ್ತಿರ, ಸ್ಟೇಶನ ರೋಡ್, ರಾಯಚೂರು (ದೂರವಾಣಿ ಸಂ: ೦೮೫೩೨-೨೫೦೪೪೦) ರವರ ಕಚೇರಿಯವರನ್ನು ಸಂಪರ್ಕಿಸಬಹುದೆಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.