ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ರಾಯಚೂರು.ಸೆ.೩೦(ಕ.ವಾ):- ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿನಲ್ಲಿ ಈ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅ.೩೦ ಆಗಿರುತ್ತದೆ ಎಂದು ಕರ್ನಾಟಕ ಮರಾಠ ಸಮುದಾಯಗಳು ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-೩-ಬಿ ಅಡಿಯಲ್ಲಿ ೨(ಎ) ಯಿಂದ ೨(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-೩ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬAಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.೩೩%, ವಿಕಲಚೇತನರಿಗೆ ಶೇ.೫% ಹಾಗೂ ತೃತೀಯ ಲಿಂಗಳಿಗೆ ಶೇ.೧% ಮೀಸಲಾತಿ ಇರಿಸಿದೆ, ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.(ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)
ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ) ಯೋಜನೆಯ ಅರ್ಹತೆಗಳು: ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.೯೮,೦೦೦/- ಮತ್ತು ನಗರ ಪ್ರದೇಶದವರಿಗೆ ರೂ.೧,೨೦,೦೦೦/-ಗಳ ಮಿತಿಯೊಳಗಿರಬೇಕು, ಅರ್ಜಿದಾರರು ೧೮ ವರ್ಷ ಮೇಲ್ಪಟ್ಟು ೫೫ ವರ್ಷದ ಒಳಗಿನವರಾಗಿರಬೇಕು, ಕನಿಷ್ಠ ೧೦ನೇ ತರಗತಿ ಉತ್ತೀರ್ಣಾಗಿರಬೇಕು ಈ ಯೋಜನೆಯಲ್ಲಿ ಕನಿಷ್ಠ ರೂ.೧,೦೦,೦೦೦/-ಗಳಿಂದ ಗರಿಷ್ಠ ರೂ.೨,೦೦,೦೦೦/-ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.೧೫ರಷ್ಟು ಕನಿಷ್ಠ ರೂ: ೨೦,೦೦೦/- ಗಳಿಂದ ಗರಿಷ್ಠ ರೂ: ೩೦,೦೦೦/- ಗಳವರೆಗೆ ಸಹಾಯಧನ ಹಾಗೂ ಶೇ.೮೫ರಷ್ಟು ಸಾಲವನ್ನು ವಾರ್ಷಿಕ ಶೇ.೪ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು, ೨ ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು ೩೪ ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಜೀಜಾವು-ಜಲಭಾಗ್ಯಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ) ಅರ್ಹತೆಗಳು: ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.೯೮,೦೦೦/- ಗಳ ಮಿತಿಯೊಳಗಿರಬೇಕು, ಅರ್ಜಿದಾರರು ೧೮ ವರ್ಷ ಮೇಲ್ಪಟ್ಟಿರಬೇಕು, ಒಂದೇ ಸ್ಥಳದಲ್ಲಿ ಹೊಂದಿಕೊAಡAತೆ ಕನಿಷ್ಠ ೨ ಎಕರೆ ಹಾಗೂ ಗರಿಷ್ಠ ೫ ಎಕರೆಜಮೀನು ಹೊಂದಿರಬೇಕು, ಉಡುಪಿ, ದಕ್ಷಿಣಕನ್ನಡ, ಕೊಡಗು, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ೧ ಎಕರೆ ಜಮೀನು ಹೊಂದಿರಬೇಕು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು, ಈ ಯೋಜನೆಯಲ್ಲಿ ಘಟಕ ವೆಚ್ಚ ರೂ.೩.೭೫ ಲಕ್ಷಗಳು (ವಿದ್ಯುದ್ದೀಕರಣ ಸೇರಿ) ಹಾಗೂ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.೪.೭೫ ಲಕ್ಷಗಳು. (ವಿದ್ಯುದ್ದೀಕರಣ ಸೇರಿ) ಹಾಗೂ ಅವಶ್ಯವಿದ್ದಲ್ಲಿ ರೂ.೫೦,೦೦೦/-ಗಳ ಸಾಲವನ್ನು ಶೇ.೪ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.
ಶೈಕ್ಷಣಿಕ ಸಾಲ ಯೋಜನೆಯ ಈಡಿesh Sಣuಜeಟಿಣs : ಅರಿವು ಶೈಕ್ಷಣಿಕ ಸಾಲ ಯೋಜನೆಯ (ಈಡಿesh Sಣuಜeಟಿಣs) ಅರ್ಹತೆಗಳು: ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಮರಾಠ ಸಮುದಾಯಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.೧,೦೦,೦೦೦/-ಗಳ ಸಾಲವನ್ನು ಶೇ.೨ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ೦೪ ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು ೩೬ ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು ೧೮ ವರ್ಷ ಮೇಲ್ಪಟ್ಟು ೩೫ ವರ್ಷದ ಒಳಗಿನವರಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.೩.೫೦ಲಕ್ಷಗಳ ಮಿತಿಯೊಳಗಿರಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಯ (ಖeಟಿeತಿಚಿಟs) ಅರ್ಹತೆಗಳು: ೨೦೨೨-೨೩ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ ೨೦೨೩-೨೪ ನೇ ಸಾಲಿಗೆ ೨ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ೨ನೇ ವರ್ಷದ ವ್ಯಾಸಂಗ ದೃಢೀಕರಣ ಮತ್ತು ಮೊದಲನೇ ವರ್ಷದ ಅಂಕಪಟ್ಟಿಯೊAದಿಗೆ ಅರ್ಜಿ ಸಲ್ಲಿಸುವುದು.
ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ಈಡಿesh Sಣuಜeಟಿಣs): ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ ಮರಾಠ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿನ ಕಿS Woಡಿಟಜ ಖಚಿಟಿಞiಟಿg ೫೦೦ ರೊಳಗೆ ಬರುವ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟೋರಲ್ ಪಿಹಚ್ಡಿ, ಮಾಸ್ಟರ್ ಡಿಗ್ರೀ, ಕೋರ್ಸುಗಳಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ವಾರ್ಷಿಕ ಗರಿಷ್ಟ ರೂ.೧೦.೦೦ ಲಕ್ಷ ಅಥವಾ ವಿದ್ಯಾರ್ಥಿಗಳ ಕೋರ್ಸ್ನ ಪೂರ್ಣ ಅವಧಿಗೆ ಗರಿಷ್ಠ ರೂ.೨೦.೦೦ ಲಕ್ಷಗಳವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲು ಅರ್ಜಿಗಳನ್ನು ಅಹ್ವಾನಿಸಿದೆ. ೨) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.೮.೦೦ಲಕ್ಷಗಳ ಮಿತಿಯೊಳಗಿರಬೇಕು.
ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(ಖeಟಿeತಿಚಿಟs) ಅರ್ಹತೆಗಳು: ೨೦೨೨-೨೩ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ ೨೦೨೩-೨೪ ನೇ ಸಾಲಿಗೆ ೨ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ೨ನೇ ವರ್ಷದ ವ್ಯಾಸಂಗ ದೃಢೀಕರಣ ಮತ್ತು ಮೊದಲನೇ ವರ್ಷದ ಅಂಕಪಟ್ಟಿಯೊAದಿಗೆ ಅರ್ಜಿ ಸಲ್ಲಿಸುವುದು.
ಮರಾಠ ಮಿಲ್ಟಿç ಹೋಟೆಲ್ ಯೋಜನೆ: ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.೮.೦೦ ಲಕ್ಷಗಳು ಮೀರತಕ್ಕದಲ್ಲ, ಅರ್ಜಿದಾರರು ವಯಸ್ಸು ಕನಿಷ್ಠ ೧೮ ವರ್ಷಗಳು ಗರಿಷ್ಠ ೫೫ ವರ್ಷಗಳು ಮೀರತಕ್ಕದಲ್ಲ, ಈ ಯೋಜನೆಯ ಘಟಕ ವೆಚ್ಚ ಗರಿಷ್ಠ ರೂ. ೫.೦೦ ಲಕ್ಷ ಸಾಲ. ರೂ: ೪೦,೦೦೦/- ಗಳು ಸಹಾಯಧನ ಅಗಿರುತ್ತದೆ, ಸಾಲವನ್ನು ವಾರ್ಷಿಕ ಶೇ.೪ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು, ೦೩ ವರ್ಷಗಳಲ್ಲಿ ಮಾಸಿಕ ಕಂತುಗಳಲ್ಲಿ ಮಂಜೂರಾತಿ ಆದೇಶದಲ್ಲಿ ನಿಗದಿಪಡಿಸಿರುವಂತೆ ಅಸಲು ಮತ್ತು ಬಡ್ಡಿಯನ್ನು ಮರುಪಾವತಿಸುವುದು.
ಸ್ವಯಂ ಉದ್ಯೋಗ ಸಾಲ ಯೋಜನೆಯ ( ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ) ಅರ್ಹತೆಗಳು : ಮನ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.೯೮,೦೦೦/- ಮತ್ತು ನಗರ ಪ್ರದೇಶದವರಿಗೆ ರೂ.೧,೨೦,೦೦೦/-ಗಳ ಮಿತಿಯೊಳಗಿರಬೇಕು, ಅರ್ಜಿದಾರರು ೧೮ ವರ್ಷ ಮೇಲ್ಪಟ್ಟು ೫೫ ವರ್ಷದ ಒಳಗಿನವರಾಗಿರಬೇಕು, ಈ ಯೋಜನೆಯಡಿ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿAದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಶೇ.೨೦ರಷ್ಟು ಅಥವಾ ಗರಿಷ್ಠ ರೂ.೧.೦೦ ಲಕ್ಷಗಳನ್ನು ನಿಗಮದಿಂದ ಸಹಾಯಧನ ಮಂಜೂರು ಮಾಡಲಾಗುವುದು, ಬ್ಯಾಂಕ್ಗಳು ಮಂಜೂರು ಮಾಡುವ ಸಾಲಕ್ಕೆ ಬ್ಯಾಂಕ್ಗಳು ಚಾಲ್ತಿಯಲ್ಲಿರುವ ಬಡ್ಡಿಯನ್ನು ವಿಧಿಸಲಾಗುತ್ತದೆ.
ಸ್ವಾಲಂಬಿ ಸಾರಥಿ ಯೋಜನೆಯ ಅರ್ಹತೆಗಳು : ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.೯೮,೦೦೦/- ಮತ್ತು ನಗರ ಪ್ರದೇಶದವರಿಗೆ ರೂ.೧,೨೦,೦೦೦/-ಗಳ ಮಿತಿಯೊಳಗಿರಬೇಕು, ಅರ್ಜಿದಾರರು ೨೧ ವರ್ಷ ಮೇಲ್ಪಟ್ಟು ೪೫ ವರ್ಷದ ಒಳಗಿನವರಾಗಿರಬೇಕು, ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಛಿಸುವ ಅರ್ಜಿದಾರರು ಲಘುವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು, ಅರ್ಜಿದಾರರು ನಿರುದ್ಯೋಗಿಯಾಗಿರಬೇಕು, ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸ್ವಯಂ ಟ್ಯಾಕ್ಸಿ ಚಾಲನೆ (ಙಇಐಐಔW ಃಔಂಖಆ) ಉದ್ದೇಶಕ್ಕೆ ವಾಹನವನ್ನು ನೊಂದಾಯಿಸತಕ್ಕದ್ದು, ಸ್ವಾಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ/ಹಣಕಾಸು ಸಂಸ್ಥೆಗಳು ಮಂಜೂರು ಮಾಡಿದ ಸಾಲದ ಶೇ.೫೦ರಷ್ಟು ಅಥವಾ ಗರಿಷ್ಠ ೩.೦೦ ಲಕ್ಷಗಳವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಉಳಿದ ಮೊತ್ತವನ್ನು ಬ್ಯಾಂಕ್/ಹಣಕಾಸು ಸಂಸ್ಥೆಗಳಿAದ ಸಾಲದ ರೂಪದಲ್ಲಿ ಪಡೆಯುವುದು ಈ ಸಾಲಕ್ಕೆ ಬ್ಯಾಂಕ್/ಹಣಕಾಸು ಸಂಸ್ಥೆಗಳು ನಿಗದಿಪಡಿಸುವ ಬಡ್ಡಿಯನ್ನು ಪಾವತಿಸಬೇಕು.
ಸ್ವಾತಂತ್ರ್ಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆಯ ಅರ್ಹತೆಗಳು : ಮರಾಠ ಸಮುದಾಯದ ಯುವಜನತೆಯನ್ನು ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗಮುಖಿಗಳನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ IಖಿIs, ಉಖಿಖಿಅs, ಏಉಖಿಖಿIs ಇತ್ಯಾದಿಗಳಲ್ಲಿ ಅಲ್ಪಾವಧಿ ಕೋರ್ಸಗಳ ಮೂಲಕ ಕೌಶಲ್ಯ ಅಭಿವೃದ್ಧಿ ತರಬೆತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾAಶದ (hಣಣಠಿs://ತಿತಿತಿ.ಞಚಿushಚಿಟಞಚಿಡಿ.ಛಿom)ಮೂಲಕ ಅರ್ಜಿಗಳನ್ನು ಅಹ್ವಾನಿಸಿದೆ.
ಕ್ರ.ಸಂ ೦೧ ರಿಂದ ೦೬ ರವರೆಗಿನ ಎಲ್ಲಾ ಯೋಜನೆಗಳಿಗೆ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ಸೇವಾಕೇಂದ್ರಗಳಲ್ಲಿ ಆನ್ಲೈನ್ ಮೂಲಕವೇ ಸಲ್ಲಿಸಬೇಕಾಗಿರುತ್ತದೆ. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂಸಹ ಆನ್ ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು. ಅರ್ಜಿದಾರರು ಸರ್ಕಾರದ ಹಾಗೂ ನಿಗಮದ ನಿರ್ದೇಶಕ ಮಂಡಳಿಯು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ/ನಿಬಂಧನೆಗಳನ್ನು ಹೊಂದಿದವರಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: ೮೮೬೭೫೩೭೭೯೯/ ದೂ.ಸಂ.:೦೮೦-೨೯೯೦೩೯೯೪ಗೆ ಬೆಳಿಗ್ಗೆ:೧೦:೦೦ ರಿಂದ ಸಂಜೆ:೫:೩೦ ರವರೆಗೆ ಸಂಪರ್ಕಿಸಬಹುದಾಗಿದೆ ಕರ್ನಾಟಕ ಮರಾಠ ಸಮುದಾಯಗಳು ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.