ರಾಯಚೂರು,ಅ ೧೬ . ಅ.೨೩ರಂದು ಜಿಲ್ಲಾಡಳಿತದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಮತಿಯನ್ನು ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯ ನಿರ್ಧರಿಸಲಾಯಿತು.
ಅ.೧೬ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಅ.೨೩ರ ಬೆಳಿಗ್ಗೆ ೯:೦೦ ಗಂಟೆಗೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿಯಂಗವಾಗಿ ನಗರದ ಕನ್ನಡ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಮಾಲರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸುವ ಮೂಲಕ ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಜಯಂತಿಯನ್ನು ಆಚರಿಸುವಂತೆ ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ನಗರಸಭೆ ಅಧಿಕಾರಿಗಳಾದ ರಾಜು, ಶಖೀಲ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹ ಕಾರ್ಯದರ್ಶಿ ದಂಡಪ್ಪ ಬಿರಾದಾರ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.