ಜ.26 ಸಿಂಧನೂರು ಬಹಳ ದಿನಗಳಿಂದ ಬಿಡುಗಡೆಗೆ ಕಾಯುತ್ತಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಇಂದು ಬಿಡುಗಡೆಯಾಗಿದೆ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶಸಿದೆ.
ನಿಗಮ ಮಂಡಳಿ ಅಧ್ಯಕ್ಷರನ್ನು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಎರಡು ವರ್ಷದ ಅವಧಿಗೆ ನೇಮಕ ಮಾಡಲಾಗಿದೆ, ಶ್ರೀ ಹಂಪನಗೌಡ ಬಾದರ್ಲಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ, ಆರ್. ಬಸನಗೌಡ ತುರವಿಹಾಳ ಶಾಸಕರಗೆ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ನಿಗಮ ಮಂಡಳಿ, ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ಅವರಿಗೆ ಪ್ರಮುಖ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ, ವಿನಯ್ ಕುಲಕರ್ಣಿ ಅವರಿಗೆ ನಗರ ನೀರು ಸರಬರಾಜು ಮತ್ತು ಒಳಚರಂಡಿ,ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಅವರಿಗೆ ರಾಜ್ಯ ರಸ್ತೆ ಅಭಿವೃದ್ದಿ ನಿಗಮ, ಸಾಗರದ ಬೇಳೂರು ಗೋಪಾಲಕೃಷ್ಣ ಅವರಿಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ,ಮಂಡಳಿಗೆ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸಂಪೂರ್ಣವಾದ ಮಾಹಿತಿಗಾಗಿ ಕೆಳಗೆ ನೀಡಿರುವ ಮಾಹಿತಿಯನ್ನು ನೋಡಿ