ಜುಲೈ 4 ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP ) ನಿಖಿಲ್ ಬಿ ಅವರನ್ನು ಕೋಲಾರ ಜಿಲ್ಲೆಗೆ (SP ) ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಯಾಗಿದೆ ಇದರ ಬೆನ್ನಲ್ಲೇ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ (SP ) ಖಾಲಿಯಾಗಿದ್ದ ಸ್ಥಾನಕ್ಕೆ ದಕ್ಷ ಪೊಲೀಸ್ ಅಧಿಕಾರಿಯಾಗಿರುವ ಪುಟ್ಟಮಾದಯ್ಯ ಅವರನ್ನು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ (SP ) ಸರ್ಕಾರ ವರ್ಗಾವಣೆ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ರಾಯಚೂರು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP ) ಆಗಿ ವರ್ಗಾವಣೆಗೊಂಡಿರುವ ಪುಟ್ಟಮಾದಯ್ಯ ಅವರು ಲೋಕಾಯುಕ್ತದಲ್ಲಿ ಎಸ್ಪಿ (SP ) ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ರಾಯಚೂರಿಗೆ ವರ್ಗಾವಣೆಯಾಗಿರುವ ನೂತನ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ (SP ) ಪುಟ್ಟಮಾದಯ್ಯ ಅವರು ಅನ್ಯಾಯ ಭ್ರಷ್ಟಾಚಾರ ಓ.ಸಿ ಮಟ್ಕಾ ಇಸ್ಪೇಟ್ ಹಾಗೂ ಇನ್ನಿತರ ಕ್ರಮ ಜುಜಾಟಗಳನ್ನು ಕಡಿವಾಣ ಹಾಕಲಿದ್ದಾರೆ ಎಂದು ಕಾದು ನೋಡಬೇಕಾಗಿದೆ.
ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ 2 ವರ್ಷ 8 ತಿಂಗಳು 13 ದಿನಗಳ ಕಾಲ ಕರ್ತವ್ಯ ನಿರ್ವಹಿಸಿ ಬೇರೆ ಜಿಲ್ಲೆಗೆ ವರ್ಗಾವಣೆಗೊಂಡಿರುವುದರಿಂದ ಈ ದಿನ ಕರ್ತವ್ಯದಿಂದ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರತ್ಯೇಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಿಬ್ಬಂದಿವರ್ಗದವರು ಹಾಗೂ ಜಿಲ್ಲೆಯ ಜನತೆಗೆ ಹೃತ್ಪೂರ್ವಕವಾದ ಧನ್ಯವಾದಗಳು ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ. ಸಾಮಾಜಿಕ ಜಾಲತಾಣಗಳಲ್ಲಿ ಹಚ್ಚಿಕೊಂಡಿದ್ದಾರೆ.