ರಾಯಚೂರು ಜುಲೈ 18. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಆರೋಗ್ಯ ಯೋಜನೆಯ ಕೈಪಿಡಿಯನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಬಿಡುಗಡೆ ಮಾಡಿದರು.
ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜುಲೈ 18ರಂದು ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕೈಪಿಡಿ ಬಿಡುಗಡೆಗೊಳಿಸಿದರು.
ಜಿಲ್ಲೆಯಾದ್ಯಂತ ಆಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯನ್ನು ಬಲಪಡಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಈ ಯೋಜನೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು 2024 ಆಕ್ಟೋಬರ್ 24 ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಉದ್ಘಾಟನೆಗೊಳಿಸಿದ್ದಾರೆ. ಈ ಕಾರ್ಯಕ್ರಮದ ಅಡಿಯಲ್ಲಿ ಆರೋಗ್ಯ ಕಾರ್ಯಕರ್ತರು ಗ್ರಾಮೀಣ ಭಾಗದ ಎಲ್ಲಾ ನಾಗರೀಕರ ಮನೆಗಳಿಗೆ ಭೇಟಿ ನೀಡಿ 30 ವರ್ಷ ವಯೋಮಾನದ ಜನರಲ್ಲಿ ಪ್ರಮುಖ 14 ಆಸಾಂಕ್ರಾಮಿಕ ರೋಗಗಳಾದ ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಸಂಬAದಿತ ಪಾದದ ಸಮಸ್ಯೆ (ಡಯಾಬಿಟಿಕ್ ಪೂಟ್) ಹಾಗೂ ಕಣ್ಣಿನ ಸಮಸ್ಯೆ (ಡಯಾಬಿಟಿಕ್ ರೆಟಿನೋಪತಿ), ದೀರ್ಘಕಾಲಿನ ಮೂತ್ರಪಿಂಡ ಕಾಯಿಲೆ, ಲಿವರ್ ಅಥವಾ ಯಕೃತಿನ ಕಾಯಿಲೆಗಳು, ಶ್ವಾಸಕೋಶ ಸಂಬAಧಿತ ದೀರ್ಘಕಾಲಿನ ರೋಗ, ನಿದ್ರೆಯಲ್ಲಿ ಉಸಿರುಕಟ್ಟುವಿಕೆ, ಬಾಯಿ, ಸ್ತನ ಹಾಗೂ ಗರ್ಭಕಂಠದ ಕ್ಯಾನ್ಸರ್, ರಕ್ತಹೀನತೆ, ಮಾನಸಿಕ ಮತ್ತು ನರವೈಜ್ಞಾನಿಕ ಕಾಯಿಲೆಗಳ ಕುರಿತು ತಿಳುವಳಿಕೆ ನೀಡಿ ಅರಿವು ಮೂಡಿಸುವರು.
ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಕಾಯಿಲೆಗಳಿಗೆ ವೈದ್ಯರ ಸಲಹೆಯಂತೆ ನಿರಂತರ ಉಚಿತ ಔಷದಿಗಳ ವಿತರಣೆ. ಅಸಾಂಕ್ರಾಮಿಕ ರೋಗಗಳನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿ. ನಿರಂತರ ಉಚಿತ ತಪಾಸಣೆ ಹಾಗೂ ಚಿಕತ್ಸೆಯ ಮೂಲಕ ಅಡ್ಡ ಪರಿಣಾಮ ಮತ್ತು ಅಕಾಲಿಕ ಮರಣ ತಡೆಗಟ್ಟುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಇದೆ ವೇಳೆ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಶಾಸಕರಾದ ಕರೆಮ್ಮ ನಾಯಕ, ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ಶರಣಗೌಡ ಪಾಟೀಲ ಬಯ್ಯಾಪುರ, ಬಸನಗೌಡ ಬಾದರ್ಲಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಪಾಮಯ್ಯ ಮುರಾರಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ., ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೊಹಪತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ್ತರಾದ ಬಸವಣ್ಣೆಪ್ಪ ಕಲಶೆಟ್ಟಿ, ಗಜಾನನ ಬಾಳೆ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶರಣಬಸವರಾಜ, ಸಿಪಿಓ ಡಾ.ಟಿ.ರೋಣಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳು ಡಾ. ಸುರೇಂದ್ರ ಬಾಬು, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಕೆ. ಗಣೇಶ್ ಸೇರಿದಂತೆ ಕೆಡಿಪಿ ನಾಮ ನಿರ್ದೇಶಿತ ಸದಸ್ಯರು ಮತ್ತು ಇನ್ನೀತರರು ಇದ್ದರು.