ರಾಯಚೂರು ಜುಲೈ 18 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯ ನೋಂದಣಿ ಅಭಿಯಾನದ ಪೋಸ್ಟರನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಬಿಡುಗಡೆ ಮಾಡಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಶಾಸಕರಾದ ಕರೆಮ್ಮ ನಾಯಕ, ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ಶರಣಗೌಡ ಪಾಟೀಲ ಬಯ್ಯಾಪುರ, ಬಸನಗೌಡ ಬಾದರ್ಲಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಪಾಮಯ್ಯ ಮುರಾರಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ., ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೊಹಪತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ್ತರಾದ ಬಸವಣ್ಣೆಪ್ಪ ಕಲಶೆಟ್ಟಿ, ಗಜಾನನ ಬಾಳೆ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶರಣಬಸವರಾಜ, ಸಿಪಿಓ ಡಾ.ಟಿ.ರೋಣಿ, ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಜಿ.ಯು.ಹುಡೇದ್, ಜಿಲ್ಲಾ ಉದ್ಯೋಗಾಧಿಕಾರಿಗಳಾದ ನವೀನಕುಮಾರ್ ಸಂಗೇಪಾಗ್ ಸೇರಿದಂತೆ ಕೆಡಿಪಿ ನಾಮ ನಿರ್ದೇಶಿತ ಸದಸ್ಯರು ಮತ್ತು ಅಧಿಕಾರಿಗಳು ಇದ್ದರು.