ರಾಯಚೂರು.ಅ.೧೧(ಕ.ವಾ):- ಭಾರತ ಸರ್ಕಾರದ ವಾರ್ತಾ ಶಾಖೆ(ಪಿಐಬಿ) ಬೆಂಗಳೂರು ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಯಚೂರು ಅವರ ಸಂಯುಕ್ತಾಶ್ರಯದಲ್ಲಿ ಅ.೧೩ರಂದು ಬೆಳಿಗ್ಗೆ ೯:೩೦ಕ್ಕೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ರಾಯಚೂರು ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾರತ ಸರ್ಕಾರದ ವಾರ್ತಾ ಶಾಖೆ(ಪಿಐಬಿ) ಬೆಂಗಳೂರು ಉಪನಿರ್ದೇಶಕ ಎಸ್.ಪ್ರಕಾಶ ಅವರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ೯:೩೦ಕ್ಕೆ ಕಾರ್ಯಾಗಾರದ ಉದ್ಘಾಟನೆ ಸಮಾರಂಭ ನಡೆಯಲಿದ್ದು, ನಂತರ ೧೧ ಗಂಟೆಗೆ ಪಿಐಬಿ ಹಾಗೂ ಆರ್ಎನ್ಐ ಕುರಿತು, ಆಯುಷ್ಮಾನ ಭಾರತ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಜಲಜೀವನ್ ಮಿಷನ್, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಪ್ರಧಾನ ಮಂತ್ರಿ ಜನಧನ್ ಯೋಜನೆ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ ಎಂದು ಭಾರತ ಸರ್ಕಾರದ ವಾರ್ತಾ ಶಾಖೆ(ಪಿಐಬಿ) ಬೆಂಗಳೂರು ಉಪನಿರ್ದೇಶಕ ಎಸ್.ಪ್ರಕಾಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.