ರಾಯಚೂರು,ಏ.10 ಜಿಲ್ಲೆಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 35 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು ಪಿ.ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 05 ಕೆ.ಜಿ ಸಾರವರ್ಧಿತ ಅಕ್ಕಿ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ ಹೆಚ್ಚುವರಿಯಾಗಿ 01 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಒಪ್ಪಿಗೆ/ಸಮ್ಮತಿ ಸೂಚಿಸಿರುವ ಎಪಿಎಲ್(ಎನ್ಪಿಹೆಚ್ಹೆಚ್) ಪಡಿತರ ಚೀಟಿದಾರರಿಗೆ ರಿಯಾಯಿತಿ ದರದಲ್ಲಿ ಪ್ರತಿ ಕೆ.ಜಿಗೆ ರೂ.15/-ರಂತೆ ಏಕ ಸದ್ಯಸರ ಪಡಿತರ ಚೀಟಿಗೆ 05 ಕೆ.ಜಿ ಅಕ್ಕಿ ಹಾಗೂ ಎರಡು ಮತ್ತು ಹೆಚ್ಚಿನ ಕುಟುಂಬ ಸದಸ್ಯರಿರುವ ಎಪಿಎಲ್ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.
ಒಂದು ರಾಷ್ಟ್ರ ಒಂದು ಪಡಿತರ ಚೀಟಿ(ಅಂತರ್ ರಾಜ್ಯ/ ಅಂತರ್ ಜಿಲ್ಲೆ) ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರರ ಕಛೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಛೇರಿಗೆ ದೂರನ್ನು ಸಲ್ಲಿಸಬಹುದಾಗಿದೆ.
ಸದರಿ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಈ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾವುದೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.