ರಾಯಚೂರು, ಮೇ.08 ಇಂದು ಬೆಳಿಗ್ಗೆ 11:00 ಗಂಟೆ ಸುಮಾರಿಗೆ ರಾಯಚೂರು ನಗರದ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ಅಂದಾಜು 60-65 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯು ನಿಶಕ್ತಳಾಗಿ ಮಲಗಿಕೊಂಡ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತಳ ಹೆಸರು, ವಿಳಾಸ ಮತ್ತು ಸಂಬಂಧಿಕರನ್ನು ಪತ್ತೆ ಹಚ್ಚುವ ಕರಿತು ಮೃತಳ ದೇಹವನ್ನು ರಾಯಚೂರು ರಿಮ್ಸ್ ಆಸ್ಪತ್ರೆಯ ಶವಾಗಾರದ ಕೋಲ್ಡ್ ಸ್ಟೋರೇಜ್ನಲ್ಲಿ ಇಡಲಾಗಿದ್ದು, ಅಪರಿಚಿತ ಶವದ ಬಗ್ಗೆ ಮಾಹಿತಿ ಗೊತ್ತದಲ್ಲಿ ಸದರಬಜಾರ್ ಪೊಲೀಸ್ ಠಾಣೆ ದೂ.ಸಂ. 08532-226148, ಪೊ.ನಂ.9480803830 ಪೊಲೀಸ್ ಕಂಟ್ರೋಲ್ ರೂಮ್ದೂ.ಸಂ. 08532-235635 ಸಂಪರ್ಕಿಸುವAತೆ ಮನವಿ ಮಾಡಿದರು.
ಮೃತ ವ್ಯಕ್ತಿಯ ಚಹರೆ ಪಟ್ಟಿ: ಎತ್ತರ 4 ಫೀಟ್, ಕಪ್ಪು ಮತ್ತು ಬಿಳಿ ಬಣ್ಣದ ಕೂದಲು, ತಿಳುನಾಸಿ ಬಣ್ಣದ ಸೀರೆ, ಕೆಂಪು ಬಣ್ಣದ ಕುಪ್ಪಸ ಧರಿಸಿರುತ್ತಾಳೆ.