ಕೊಪ್ಪಳ ಏಪ್ರಿಲ್ 17 (ಕರ್ನಾಟಕ ವಾರ್ತೆ): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಕುರಿಸಾಕಾಣಿಕೆ ತರಬೇತಿಗಾಗಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ತಮ್ಮ ಆಧಾರ ಕಾರ್ಡ ಜೆರಾಕ್ಸ್ ಪ್ರತಿ, ರೇಶನ್ ಕಾರ್ಡ ಜೆರಾಕ್ಸ್ ಪ್ರತಿ, ಪಾಸ್ಪೋರ್ಟ್ ಸೈಜ್ ಮೂರು ಫೋಟೋ, ಮಾರ್ಕ್ಸಕಾರ್ಡ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ.ಸಂ: 08539-231038, ಇಲ್ಲಿಗೆ ಸಲ್ಲಿಸಬೇಕು.
ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಕುರಿಸಾಕಾಣಿಕೆ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ತರಬೇತಿಗಾಗಿ ಏಪ್ರಿಲ್ 26 ರಂದು ಸಂದರ್ಶನ ನಡೆಯಲಿದ್ದು, ಏ. 27ರಿಂದ ತರಬೇತಿ ಪ್ರಾರಂಭವಾಗಲಿವೆ ಎಂದು ಕೊಪ್ಪಳ ಎಸ್ಬಿಐ ಆರ್ಸಿಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.