ರಾಯಚೂರು,ಜೂ.೨೧,ಭಾರತ ಸರ್ಕಾರದ ಎಂ.ಎಸ್.ಎA.ಇ. ಯೋಜನೆಯಡಿ ೨೦೨೪-೨೫ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ವಿದ್ಯಾವಂತ ಯುವಕ, ಯುವತಿಯರಿಗೆ, ಕಸಬುದಾರರಿಗೆ ಅತೀ ಸಣ್ಣ ಕೈಗಾರಿಕಾ ಘಟಕಗಳನ್ನು ಹಾಗೂ ಸೇವಾ ಚಟುವಟಿಕೆಗಳನ್ನು ಪ್ರಾರಂಭ ಮಾಡುವ ಸಲುವಾಗಿ ಈ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೆಬ್ಸೈಟ್ ವಿಳಾಸ: www.kvic.gov.in / pmegp online application registration.
ಕೈಗಾರಿಕೆಗಳನ್ನು ಪ್ರಾರಂಭ ಮಾಡುವಂತಹ ಭಾವಿ ಉದ್ದಿಮೆದಾರರಿಗೆ ಹಾಗೂ ಸಾಮಾನ್ಯ ವರ್ಗದವರಿಗೆ ನಗರ ಪ್ರದೇಶದಲ್ಲಿ ಶೇ:೧೫% ರಂತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶೇ:೨೫% ರಂತೆ ಸಹಾಯಧನದ ಸೌಲಭ್ಯವಿರುತ್ತದೆ. ಪರಿಶಿಷ್ಟ ಜಾತಿ. ಪರಿಶಿಷ್ಟ ಪಂಗಡ. ಹಿಂದುಳಿದ ವರ್ಗ, ಅಲ್ಪಸಂಖ್ಯಾತರರು, ಮಾಜಿ ಸೈನಿಕರು, ಅಂಗವಿಕಲರು ಹಾಗೂ ಮಹಿಳಾ ಉದ್ದಿಮೆದಾರರಿಗೆ ನಗರ ಪ್ರದೇಶದವರಿಗೆ ಶೇ:೨೫% ರಂತೆ ಹಾಗೂ ಗ್ರಾಮೀಣ ಪ್ರದೇಶದವರಿಗೆ ಶೇ:೩೫% ರಂತೆ ಸಹಾಯಧನವನ್ನು ಕಲ್ಪಿಸಲಾಗುತ್ತದೆ. ಈ ಯೋಜನೆಯಡಿ ಸಂಯುಕ್ತವಾಗಿ ಯಂತ್ರೋಪಕರಣಗಳ ಖರೀದಿಗಾಗಿ ಹಾಗೂ ದುಡಿಮೆ ಬಂಡವಾಳದ ಸಲುವಾಗಿ ಸಾಲ ಸೌಲಭ್ಯವನ್ನು ಬ್ಯಾಂಕ್ ಮುಖಾಂತರ ಕಲ್ಪಿಸಲಾಗುತ್ತದೆ. ಆನ್ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಆನ್ಲೈನ್ ಮುಖಾಂತರ ಸರ್ವಿಸ್ ಏರಿಯಾ ಪ್ರಕಾರ ಆಯಾ ಬ್ಯಾಂಕುಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಶಿಫಾರಸ್ಸು ಮಾಡಲಾಗುತ್ತದೆ. ಬ್ಯಾಂಕಿನಿಂದ ಸಾಲ ಮಂಜೂರಾತಿ ಪತ್ರ ನೀಡಿದ ಬಳಿಕೆ ಅಭ್ಯರ್ಥಿಗಳಿಗೆ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಕನಿಷ್ಠ ೧೮ ವರ್ಷ ಮೇಲ್ಪಟ್ಟವರು, ಕನಿಷ್ಠ ೮ನೇ ತರಗತಿ ಪಾಸಾಗಿರಬೇಕು. ಯಾವುದೇ ಆದಾಯ ಮಿತಿ ಇರುವುದಿಲ್ಲ. ಜಾತಿ ಪ್ರಮಾಣ ಪತ್ರ, ಗ್ರಾಮೀಣ ಪ್ರಮಾಣ ಪತ್ರ. ಯೋಜನಾ ವರದಿ. ಉದ್ಯಮಶೀಲತಾಭಿವೃದ್ಧಿ ತರಬೇತಿ ಪ್ರಮಾಣ ಪತ್ರ (ತರಬೇತಿ ಪಡೆದಿದ್ದಲ್ಲಿ). ಆಧಾರ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಛಾಯ ಪ್ರತಿ, ಪಾಸ್ಪೋರ್ಟ್ ಸೈಜ್ ಫೋಟೋ, ಗ್ರಾಮೀಣ ಪ್ರದೇಶ ಅಭ್ಯರ್ಥಿಗಳು ಇದ್ದಲ್ಲಿ ವಾಸಸ್ಥಳ ಪ್ರಮಾಣ ಪತ್ರ, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ಸಿಬಿಲ್ ರಿಪೋರ್ಟ್ ಬೇಕಾಗಿರುತ್ತವೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಹೈದ್ರಾಬಾದ ರಸ್ತೆ ರಾಯಚೂರು ಇವರನ್ನು ಕಛೇರಿ ಸಮಯದಲ್ಲಿ ದೂರವಾಣ ಮೂಲಕ ೭೮೯೨೭೪೪೬೭೭, ೮೮೬೧೨೪೧೦೯೩ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.