ರಾಯಚೂರು,ಏ.೧೫(ಕ.ವಾ):- ಚುನಾವಣಾ ಕಾರ್ಯಗಳಲ್ಲಿ ಅಥವಾ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿ ಮಕ್ಕಳನ್ನು ಕೆಲಸ ಅಥವಾ ಇನ್ಯಾವುದೋ ಕಾರ್ಯಗಳಲ್ಲಿ ನೇಮಿಸಿಕೊಂಡಲ್ಲಿ ಕಲಂ ೧೪ ರಡಿಯಲ್ಲಿ ೨ ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ರೂ.೫೦,೦೦೦/- ದಂಡವನ್ನು ವಿಧಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಎಲ್.ಚಂದ್ರಶೇಖರ ನಾಯಕ ಅವರು ತಿಳಿಸಿದ್ದಾರೆ.
ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) ೨೦೧೫ರ ಅನ್ವಯ ೧೮ ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣ ತವಾಗಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ ೩೨ ಮತ್ತು ೩೬ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣ ಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.
ಚುನಾವಣಾ ಕಾರ್ಯಗಳಲ್ಲಿ ಅಥವಾ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದ್ದು, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-೧೯೮೬ ಹಾಗೂ ತಿದ್ದುಪಡಿ ಕಾಯ್ದೆ-೨೦೧೬ ಕಾಯ್ದೆ ಅನ್ವಯ ೧೪ ವರ್ಷದೊಳಗಿನ ಮಕ್ಕಳನ್ನು ಯಾವುದೇ ದುಡಿಮೆ ಕಾರ್ಯದಲ್ಲಿ ಅಥವಾ ದುಡಿಮೆ ಚಟುವಟಿಕೆಗಳಲ್ಲಿ ಬಳಸಿಕೊಳ್ಳುವುದನ್ನು ನಿಷೇಧಿಸಿದೆ ಮತ್ತು ೧೮ ವರ್ಷದೊಗಿನ ಮಕ್ಕಳು ಅಪಾಯಕಾರಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವುದನ್ನು ನಿಷೇಧಿಸಿದೆ. ಒಂದು ವೇಳೆ ಸದರಿ ಕಾಯ್ದೆಯನ್ನು ಉಲ್ಲಂಘಿಸಿ ಮಕ್ಕಳನ್ನು ಕೆಲಸ ಅಥವಾ ಇನ್ಯಾವುದೋ ಕಾರ್ಯಗಳಲ್ಲಿ ನೇಮಿಸಿಕೊಂಡಲ್ಲಿ ಕಲಂ ೧೪ ರಡಿಯಲ್ಲಿ ೨ ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ರೂ.೫೦,೦೦೦/- ದಂಡವನ್ನು ವಿಧಿಸಬಹುದಾಗಿದೆ.
ರಾಜಕೀಯ ಪಕ್ಷಗಳ ಮುಖಂಡರುಗಳಿಗೆ ಹಾಗೂ ಸಾರ್ವಜನಿಕರು ಯಾವುದೇ ಚುನಾವಣೆ ಕಾರ್ಯಗಳಲ್ಲಿ ಹಾಗೂ ಯಾವುದೇ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳಬಾರದು. ಒಂದು ವೇಳೆ ಯಾರಾದರು ಈ ರೀತಿಯ ಕಾರ್ಯಗಳಲ್ಲಿ ೧೮ ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡಲ್ಲಿ ಮೇಲ್ಕಾಣ ಸಿದ ಕಾಯ್ದೆಗಳನ್ವಯ ಕಾನೂನು ರೀತ್ಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.