ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ತಡೆಗೆ ಹೆಚ್ಚಿನ ಜಾಗೃತಿ ಅಗತ್ಯ: ನ್ಯಾ.ಹೆಚ್.ಎ.ಸಾತ್ವಿಕ್
ರಾಯಚೂರು,ಸೆ.12, ಇತ್ತೀಚಿನ ದಿನಗಳಲ್ಲಿ ಯುವಕರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ತಡೆಗೆ ಹೆಚ್ಚಿನ ಜಾಗೃತಿ ಅಗತ್ಯವಾಗಿದೆ ಎಂದು ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ಹೇಳಿದರು.
ಅವರು ಸೆ.12ರ ಗುರುವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಕಾರಾಗೃಹ, ಅಬಕಾರಿ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯ ಅಂಗವಾಗಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.
ಮಾನಸಿಕ ಒತ್ತಡದಲ್ಲಿ ಸಿಲುಕಿರುವವರಿಗೆ ನೈತಿಕ ಹಾಗೂ ಸಾಮಾಜಿಕ ಬೆಂಬಲ ನೀಡುವುದು ಸಮುದಾಯದ ಕರ್ತವ್ಯವಾಗಿದೆ. ಯಾವುದೇ ಸಮಸ್ಯೆಗೆ ಆತ್ಮಹತ್ಯೆಯ ಪರಿಹಾರವಲ್ಲ. ಒಂಟಿ ಭಾವನೆ, ಸದಾ ಬೇಜಾರು ಇತರರಿಗೆ ಹೊರೆ ಎಂಬ ಭಾವನೆ, ಆತ್ಮಹತ್ಯೆಯ ಮಾರ್ಗಗಳ ಹುಡುಕಾಟ, ಮದ್ಯದಂತಹ ವ್ಯಸನಕಾರಿ ವಸ್ತುಗಳ ಸೇವನೆಯಲ್ಲಿ ಹೆಚ್ಚಳ, ಇವು ವ್ಯಕ್ತಿಯಲ್ಲಿ ಆತ್ಮಹತ್ಯೆಯ ಎಚ್ಚರಿಕೆಯ ಚಿಹ್ನೆಗಳಾಗಿರುತ್ತವೆ. ಆತ್ಮಹತ್ಯೆಗೆ ಪ್ರಮುಖ ಕಾರಣಗಳು ಹತಾಶೆ, ಉದ್ವೇಗ, ಪ್ರವೃತ್ತಿ, ತೀವ್ರ ಅನಾರೋಗ್ಯ ಜೀವನದ ಒತ್ತಡಗಳು, ಮಾನಸಿಕ ಸಮಸ್ಯೆಗಳು, ನಿಕಟ ವ್ಯಕ್ತಿಯ ಆತ್ಮಹತ್ಯೆ, ಮದ್ಯಪಾನ, ಮಾದಕ ವಸ್ತುಗಳ ಬಳಕೆ, ವ್ಯಸನ, ಇವು ಸಹ ಕಾರಣಗಳಾಗಿರುತ್ತವೆ ಎಂದು ತಿಳಿಸಿದರು.
ವಿಶ್ವ ಆತ್ಮಹತ್ಯೆ ತಡೆ ದಿನ ಆಚರಣೆಯು ದುಃಖದ ಸಂಗತಿಯಾಗಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳ ಬೆಳೆವಣಿಗೆ ಮೇಲೆ ವ್ಯತಿರಿಕ್ತವಾಗಿ ಪರಿಣಾಮಗಳು ಬೀಳುತ್ತಿವೆ. ಮಕ್ಕಳ ಮನಸ್ಥಿತಿ ತಿಳಿದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪರೀಕ್ಷೆಗಳಲ್ಲಿ ಮಕ್ಕಳು ಅನುತ್ತಿರ್ಣವಾದಲ್ಲಿ ಅದನ್ನು ಸಹಿಸಿಕೊಳ್ಳದೇ ಆತ್ಮಹತ್ಯೆಗೆ ಶರಣಾಗುತ್ತಿರುವುದು ಕಾಣುತ್ತಿದ್ದೇವೆ. ಮಕ್ಕಳ ಮನಸ್ಸಿನ ಮೇಲೆ ಗಾಡವಾದ ಪ್ರಭಾವ ಬೀರುವ ವಿಷಯಗಳ ಕುರಿತು ಪೋಷಕರು ತಮ್ಮ ಮಕ್ಕಳಿಗೆ ಆತ್ಮಸ್ಥೆರ್ಯ ಹೆಚ್ಚಿಸಲು ಮತ್ತು ಅವರನ್ನು ಮಾನಸಿಕವಾಗಿ ಕುಗ್ಗದಂತೆ ನೋಡಿಕೊಳ್ಳಬೇಕಿದೆ ಎಂದರು. ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಾಥಾವು ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರಾರಂಭಗೊAಡು ಜಗಜ್ಯೋತಿ ಬಸವಶ್ವೇರ ವೃತ್ತ ದಿಂದ ಡಾ.ಬಾಬ ಸಾಹೇಬ್ ಅಂಬೇಡ್ಕರ್ ವೃತ್ತ ಮೂಲಕ ತಹಶೀಲ್ದಾರ್ ಕಚೇರಿಯ ಮುಖ್ಯಬೀದಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಾಲಯದವರಿಗೆ ನಡೆಸಲಾಯಿತು. ಈ ವೇಳೆ ವಿವಿಧ ಘೋಷಣೆಗಳನ್ನು ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಕೂಗುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ವಕ್ಷಣಾಧಿಕಾರಿ ಡಾ.ಗಣೇಶ, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ವಿಜಯಶಂಕರ್, ನವೋದಯ ಮೆಡಿಕಲ್ ಕಾಲೇಜಿನ ಪ್ರಾಚಾರ್ಯರರಾದ ಡಾ.ಬಿ.ದೇವಾನಂದ, ಹಿರಿಯ ಮನೋವೈದ್ಯರಾದ ಡಾ.ಮನೋಹರ ಪತ್ತರಾ, ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಶರಣಪ್ಪ ನಂದಿಹಾಳ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ರಿಮ್ಸ್ ಮತ್ತು ನವೋದಯ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಇದ್ದರು.