ಮಾ 31.ಕರ್ನಾಟಕ ಅದ್ಯಂತ ದಿನಾಂಕ ಇಂದಿನಿಂದ 15-04-2023 ತನಕ SSLC ಅಂತಿಮ ಪರೀಕ್ಷೆಗಳು ನಡೆಯುತ್ತವೆ. ಪರೀಕ್ಷೆಯ ದಿನದಂದು, ಪರೀಕ್ಷೆಯ ಸಮಯದಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನ ಜಾರಿಗೊಳಿಸಲಾಗಿದೆ.
ಇಂದಿನಿಂದ SSLC ಪರೀಕ್ಷೆ ಪ್ರಾರಂಭವಾಗಲಿದ್ದು ಪರೀಕ್ಷೆಯ ಮೊದಲ ದಿನ ಮಾರ್ಚ್ 31 ಶುಕ್ರುವಾರದಂದು ಮೊದಲ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಸಂಸ್ಕೃತ, ಇಂಗ್ಲಿಷ್ ವಿಷಯದ ಪರೀಕ್ಷೆಯು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರ ವರೆಗೆ 100 ಅಂಕಕ್ಕೆ ನಡೆಯಲಿವೆ.
ಈ ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಿ ವಿದ್ಯಾರ್ಥಿಗಳೇ
1) ಪರೀಕ್ಷಾ ಕೊಠಡಿಗೆ 15 ನಿಮಿಷ ಮೊದಲೇ ಪ್ರವೇಶಿಸಲು ಅವಕಾಶ
2) ಕಲ್ಪಿಸಿರುವುದರಿಂದ ಅರ್ಧ ಗಂಟೆ ಮೊದಲೇ ಕೇಂದ್ರದಲ್ಲಿರಿ
3) ಪ್ರವೇಶ ಪತ್ರವನ್ನು ಕೊಂಡೊಯ್ಯುವುದನ್ನು ಮರೆಯದಿರಿ
4) ಪ್ರವೇಶಪತ್ರದ ಜೊತೆ ಮಾನ್ಯವಾದ ಐಡಿ ಕಾರ್ಡ್ ತೆಗೆದುಕೊಂಡು ಹೋಗಿ
5) ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ನಿಷೇಧ ಇರುವುದರಿಂದ ಮೊಬೈಲ್ ಸ್ಮಾರ್ಟ್ ವಾಚ್ಗಳನ್ನು ಮನೆಯಲ್ಲೇ ಬಿಟ್ಟುಹೋಗುವುದು ಉತ್ತಮ
6) ಪರೀಕ್ಷೆಗೆ ಅವಶ್ಯವಿರುವ ಪೆನ್ ಹಾಗೂ ಲೇಖನ ಸಾಮಗ್ರಿಗಳನ್ನು ಪೌಚ್ನಲ್ಲಿ ತೆಗೆದುಕೊಂಡು ಹೋಗಿ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂದರ್ಭದಲ್ಲಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಕಲ್ಪಿಸಿದೆ. ಜತೆಗೆ ಬಸ್ ಸಂಚರಿಸುವ ಮಾರ್ಗದಲ್ಲಿ ವಿದ್ಯಾರ್ಥಿಗಳಿಗಾಗಿ ಕೋರಿಕೆ ನಿಲುಗಡೆ ಮಾಡುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿವೆ.
ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಗಳು, ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಬಸ್ ಸೌಲಭ್ಯವನ್ನು ಪಡೆಯಬಹುದಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಮತ್ತು ಹಿಂದಿರುವಾಗ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ
ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ, ಯಶಸ್ಸು ನಿಮ್ಮದಾಗಲಿ.
ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಅತ್ಯುತ್ತಮ ರೀತಿಯಲ್ಲಿ ಬರೆಯುವ ಆತ್ಮವಿಶ್ವಾಸ ಶಕ್ತಿ ಆರೋಗ್ಯ ನಿಮ್ಮೆಲ್ಲರಿಗೂ ಆ ದೇವರು ದಯಪಾಲಿಸಲಿ ಮತ್ತು ಉತ್ತಮ ಅಂಕಗಳನ್ನು ಪಡೆದು ಕಲಿತ ಶಾಲೆಗೆ ಕಲಿಸಿದ ಶಿಕ್ಷಕರಿಗೆ ಜನ್ಮ ನೀಡಿದ ತಂದೆ ತಾಯಿಗಳಿಗೆ ಕೀರ್ತಿ ತನ್ನಿ
ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ, ಯಶಸ್ಸು ನಿಮ್ಮದಾಗಲಿ.
( ಇದು ಬಡವರ ಬಾರಕೋಲು ಪತ್ರಿಕೆಯ ಕಳಕಳಿ )