ಜೂನ್ 21.ರಾಜ್ಯದಲ್ಲಿ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಹೆಚ್ಚಾಗಿದ್ದರಿಂದ ಸನ್ಮಾನ್ಯ ಶ್ರೀ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹರಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಮ್ಮ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಫೇಕ್ ನ್ಯೂಸ್ಗಳನ್ನು ಹರಡುವ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಾನೂನು ರೀತ್ಯ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ ಎಚ್ಚರಿಕೆ….! ರಚನಾತ್ಮಕ ಟೀಕೆಗಳಿಗೆ ನಾವು ಮುಕ್ತರಿದ್ದೇವೆ, ಆದರೆ ಸುಳ್ಳು ಸುದ್ದಿಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಾವು ಖಂಡಿತಾ ಸಹಿಸುವುದಿಲ್ಲ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಸಾವಳಿ ಮಿತಿಮೀರಿದೆ ಸಂಬಂಧ ಪಟ್ಟ ಅಧಿಕಾರಗಳು ಈ ಫೇಕ್ ನ್ಯೂಸ್ ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಸೈಬರ್ ಪೊಲೀಸರು ಫೇಕ್ ನ್ಯೂಸ್ ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ಧವಾಗಿ ಕೆಲಸ ಮಾಡಬೇಕು ಪ್ರತಿ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಸುಳ್ಳು ಸುದ್ದಿಗಳ ಮೂಲಕ ಸಮಾಜದ ಅಶಾಂತಿ ಸೃಷ್ಟಿಸುವ ಪ್ರಯತ್ನವನ್ನು ಯಾರೇ ಮಾಡಿದರು ಅದನ್ನು ಸರ್ಕಾರ ಸಹಿಸುವುದಿಲ್ಲ ಸಾಮರಸ್ಯ ಕಾಪಾಡುವ ಜೊತೆಗೆ ಪ್ರತಿಯೊಬ್ಬರಿಗೂ ಶಾಂತಿ ನೆಮ್ಮದಿಯ ವಾತಾವರಣವನ್ನು ನೀಡಲು ನಾವು ಬದ್ಧರಿದ್ದೇವೆ ಎಂದು ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.