ರಾಯಚೂರು,ಏ.10 ಭಾರತೀಯ ಚುನಾವಣೆ ಆಯೋಗದ ಅಧಿಸೂಚನೆಯಂತೆ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏ.14 ರಂದು ಜರುಗಲಿರುವ ಭಾರತ ರತ್ನ ಸವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು 132 ನೇ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ರಾಯಚೂರು ವತಿಯಿಂದ ಗೌರವಪೂರ್ವಕವಾಗಿ ಅರ್ಥಪೂರ್ಣವಾಗಿ ಮತ್ತು ಸರಳ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ, ಉಪನಿರ್ದೇಶಕರು ತಿಳಿಸಿದ್ದಾರೆ.
ಏ.14ರ ಬೆಳಿಗ್ಗೆ 9:00 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಭಾರತ ರತ್ನ ಸವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಗೆ ಪೂಜೆ ಹಾಗೂ ಮಾಲಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.