ರಾಯಚೂರು,ಮೇ.05 ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ನಗರ ಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಮದ ಮೇ.10 ರಂದು ಬೆಳಿಗ್ಗೆ 09:00 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಬೇಕಾಗಿರುತ್ತದೆ. ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಯಲ್ಲಿ ಈ ಜಯಂತಿ ಆಚರಣೆಯನ್ನು ಸರಳ ಹಾಗೂ ಸಂಕೇತಿಕವಾಗಿ ಆಚರಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.