ಸಿರುಗುಪ್ಪ : ಸಿರುಗುಪ್ಪ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಟಿಕೆಟ್ ಖಚಿತವಾದ್ದರಿಂದ ಅಭಿಮಾನಿಗಳ ಒತ್ತಾಯದ ಮೇರೆಗೆ ಬಿ.ಎಂ.ನಾಗರಾಜ್ ಅವರು ತಮ್ಮ ನಿವಾಸದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ ಮಹಾತ್ಮಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಹೈಕಮಾಂಡ್ನಿಂದ ನಡೆಸಿದ ಸಮೀಕ್ಷೆಯಲ್ಲಿ ತಾಲೂಕಿನಾದ್ಯಂತ ಸ್ಥಳೀಯರಿಗೆ ಆದ್ಯತೆ ಸಿಗಬೇಕೆನ್ನುವ ಒತ್ತಾಯದ ಹಿನ್ನಲೆಯಲ್ಲಿ ಕಳೆದ ಚುನಾವಣೆಯಲ್ಲಿ ಪರಾಜಿತಗೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಬಿ.ಮುರುಳಿಕೃಷ್ಣ ಹಾಗೂ ಕ್ಷೇತ್ರದ ಮಾಜಿ ಶಾಸಕ ಬಿ.ಎಂ.ನಾಗರಾಜರ ನಡುವೆ ಭಾರಿ ಪೈಪೋಟಿಯಿಂದಾಗಿ ಹಲವು ದಿನಗಳಿಂದ ಬಾರಿ ಕುತೂಹಲ ಮೂಡಿಸಿತ್ತು.
ಕಾಂಗ್ರೇಸ್ ಹೈಕಮಾಂಡ್ನಿಂದ ಇಂದು ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಅಭಿಮಾನಿಗಳು ಪಟಾಕಿ ಸಿಡಿಸಿ ಮೆರವಣಿಗೆ ಯುದ್ದಕ್ಕೂ ಜೈಕಾರದ ಘೋಷಣೆಯೊಂದಿಗೆ ಪರಸ್ಪರ ಬಣ್ಣ ಹಚ್ಚಿಕೊಂಡು ಸಂಭ್ರಮಿಸಿದರು