ಸಿಂಧನೂರು ಜೂ.2- ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಗೆ ಜಿಲ್ಲೆಯ ಮೂವರು ಸೇರಿದಂತೆ ಎಂಟು ಅಭ್ಯರ್ಥಿಗಳನ್ನು ಕಾಂಗ್ರೆಸ್ ಹೈಕಮಾಂಡ್ ಇಂದು ಘೋಷಿಸಿದೆ.
ಎಐಸಿಸಿ (AICC) ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಸೂಚನೆ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಇಂದು ಅಭ್ಯರ್ಥಿಗಳ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಹಿರಿಯ ರಾಜಕಾರಣಿ, ಸಚಿವ ಎನ್.ಎಸ್.ಬೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷ ಎ.ವಸಂತಕುಮಾರ ಬಸನಗೌಡ ಬಾದರ್ಲಿ ಯವರಿಗೆ ಪಕ್ಷ ಮನ್ನಣೆ ನೀಡಿದೆ ಉಳಿದಂತೆ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ, ಕೆ.ಗೋವಿಂದರಾಜು, ಐವಾನ್ ಡಿಸೋಜಾ, ಬಿಲ್ಕಿಸ್ ಬಾನು,ಜಗದೇವ ಗುತ್ತೇದಾರ್ ರವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಬಸನಗೌಡ ಬಾದರ್ಲಿ ಅಭಿಮಾನಿಗಳು ನಗರ ಹಾಗೂ ಹಳ್ಳಿಗಳಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದ್ದಾರೆ.