ರಾಯಚೂರು ಏ.04. ಭಗವಾನ್ ಮಹಾವೀರರು ಜೈನ ಧರ್ಮದ 24ನೇ ತೀರ್ಥಂಕರರು ಹಾಗೂ ಧರ್ಮದ ಪ್ರಮುಖ ಸಿದ್ದಾಂತ ಪ್ರಚಾರಕರಾಗಿದ್ದರು. ಮಹಾವೀರರ ತತ್ವ ಸಿದ್ದಾಂತಗಳಿಂದ ಸಮಾಜದಲ್ಲಿ ಒಳ್ಳೆಯ ವಿಚಾರಗಳನ್ನು ಜನರಲ್ಲಿ ಮೂಡಿಸಿದವರಾಗಿದ್ದರು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ ಅವರು ಹೇಳಿದರು.
ಮಂಗಳವಾರ ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಜಗತ್ತಿಗೆ ಬದುಕಬೇಕು ಮತ್ತು ಬದುಕಲು ಬಿಡಬೇಕು ಎಂಬ ಸಂದೇಶವನ್ನು ಸಾರಿದ ಭಗವಾನ್ ಮಹಾವೀರರು ಅಹಿಂಸಾ ಮಾರ್ಗವನ್ನು ಅನುಸರಿಸುತ್ತಿದ್ದರು. ಭಗವಾನ್ ಮಹಾವೀರರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಭಗವಾನ್ ಮಹಾವೀರ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಭಗವಾನ್ ಮಹಾವೀರ ಜಯಂತಿಯನ್ನು ಸರಳ ರೀತಿಯಲ್ಲಿ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿಗಳಾದ ರಮೇಶ, ಇಸ್ಮಾಯಿಲ್, ವಿನೋದ್, ದಂಡಪ್ಪ ಬಿರಾದರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.