ರಾಯಚೂರು,ಜು.೨೪ ಗ್ರಾಮದಲ್ಲಿರುವ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ಬಗೆಹರಿಸಲು ಗ್ರಾಮ ಪಂಚಾಯತಿ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಸರ್ಕಾರದ ಪ್ರತಿನಿದಿಯಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು.
ಅವರು ಜು.೨೪ರ(ಸೋಮವಾರ) ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಗರಕಲದಿನ್ನಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್, ಲಿಂಗಸುಗೂರು ತಾಲೂಕು ಪಂಚಾಯತ್, ನರಕಲ್ದಿನ್ನಿ ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಭಾರತ ನಿರ್ಮಾಣ ಸೇವಾ ಕೇಂದ್ರ ಹಾಗೂ ನೂತನ ಗ್ರಾಮ ಪಂಚಾಯತ್ ಕಾರ್ಯಾಲಯದ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.
ಪ್ರತಿಯೊಬ್ಬ ನಾಗರೀಕರಿಗೂಆಡಳಿತ ಸೇವೆಗಳು ದೊರೆಯುವಂತಾಗಲು ಹಾಗೂ ಸಾರ್ವಜನಿಕ ಹಕ್ಕುಗಳನ್ನು ಪಡೆದುಕೊಳ್ಳಲು ಗ್ರಾಮ ಪಂಚಾಯತಿಗಳು ಕಾರ್ಯನಿರ್ವಹಿಸಬೇಕು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಜನರಿಗೆ ಉತ್ತಮ ರೀತಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹಾಗೂ ಗ್ರಾಮ ಪಂಚಾಯತಿಗಳಿಗೆ ನೀಡಲಾದ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಅನುಷ್ಟಾನಗೊಳಿಸುವಲ್ಲಿ ಗ್ರಾ.ಪಂ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್, ವಿಧಾನ ಪರಿಷತ್ ಸದಸ್ಯ ಶರಣೇಗೌಡ ಬಯ್ಯಾಪೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.