ರಾಯಚೂರು,ಏ.04 . ಮೇ.10 ರಂದು ವಿಧಾನಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಮತದಾನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳ ಮೂಲಕ ಹಾಗೂ ಇನ್ನಿತರ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಲು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು.
ಸೋಮವಾರ ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಜಲನಿರ್ಮಲ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರ ಪ್ರದೇಶಗಳಲ್ಲಿ ನಗರಸಭೆಗಳ ಕಸ ವಿಲೇವಾರಿ ಮಾಡುವ ವಾಹನಗಳು, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾ.ಪಂಯ ಕಸ ವಿಲೇವಾರಿ ವಾಹನಗಳಿಗೆ ಮತದಾನದ ಕುರಿತು ಜಾಗೃತಿ ಮೂಡಿಸುವ ಬ್ಯಾನರ್ಗಳನ್ನು ಹಾಕಿಸಬೇಕು, ಸಿನೆಮಾ ಥಿಯೇಟರ್ಗಳಲ್ಲಿ ಮತದಾನದ ಸಾಕ್ಷ್ಯ ಚಿತ್ರಗಳನ್ನು ಪ್ರದರ್ಶಿಸಬೇಕು ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳು, ಸ್ಥಳೀಯ ಟಿವಿ ಮಾಧ್ಯಮಗಳಲ್ಲಿ ಮತದಾನದ ಮಹತ್ವ, ಹಕ್ಕಿನ ಕುರಿತು ಪ್ರಚಾರ ಹೆಚ್ಚಾಗಿ ನಡೆಯಬೇಕು. ಮತ್ತು ಹಾಲಿನ ಪಾಕೇಟ್ಗಳ ಮೇಲೆ ಹಾಗೂ ಬಸ್ ಟಿಕೇಟ್ಗಳ ಮೇಲೆ ಮತದಾನದ ಹಕ್ಕಿನ ಕುರಿತು ಸಚಿದೇಶಗಳನ್ನು ಹಾಕಿಸಿಬೇಕು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ ಸ್ಭೆರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.