ರಾಯಚೂರು,ಮೇ.07ಪ್ರತಿಯೊಬ್ಬರು ಮೇ.10ರಂದು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಸತಾತ್ಮಕ ವ್ಯವಸ್ಥೆಗೆ ಸದೃಢ ಸರ್ಕಾರವನ್ನು ಅಧಿಕಾರಕ್ಕೆ ತರಲು ಹೊಣೆಗಾರರಾಗಿ ಜವಾಬ್ದಾರಿಯಿಂದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು.
ಅವರು ಮೇ.07ರಂದು ತಾಲೂಕಿನ ಶಕ್ತಿನಗರ ಹಾಗೂ ದೇವಸುಗೂರು ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮನೆ ಮನೆಗೂ ಮತದಾನದ ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಸಿಕ್ಕಿರುವ ವಿಶೇಷವಾದ ಹಕ್ಕು ಎಂದರೇ ಅದು ಮತದಾನ ಆದ್ದರಿಂದ ಈ ವಿಶೇಷವಾದ ಹಕ್ಕನ್ನು ಪ್ರತಿಯೊಬ್ಬರು ಮೇ.10ರಂದು ಮತದಾನ ಮಾಡುವ ಮೂಲಕ ಚಲಾಯಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ಪ್ರತಿ ಮನೆ ಮನೆಗೂ ತೆರಳಿ ಮೇ.10 ರಂದು ತಪ್ಪದೇ ಮತದಾನ ಮಾಡಬೇಕೆಂದು ಕರಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ತಾಲೂಕಿ ಪಂಚಾಯತ್ ಇಒ ರಾಮರೆಡ್ಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ ಸೇರಿದಂತೆ ಆರ್.ಟಿ.ಪಿ.ಎಸ್ ಹಾಗೂ ವೈಟಿಪಿಎಸ್ ಮುಖ್ಯಸ್ಥರು, ತಾ.ಪಂ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.