ರಾಯಚೂರು ಡಿಸೆಂಬರ್ ೨೮ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿಸೆಂಬರ್ ೩೦ ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
Please subscribe and support my channel
ಅಂದು ಬೆಳಿಗ್ಗೆ ೯.೩೦ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ ೧೦.೨೦ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್ಸ್ಟಿçಪ್ಗೆ ಆಗಮಿಸುವರು. ಅಲ್ಲಿಂದ ೧೦.೩೦ಕ್ಕೆ ನಿರ್ಗಮಿಸಿ ೧೧.೦೫ಕ್ಕೆ ರಾಯಚೂರು ಜಿಲ್ಲೆಯ ಸಿಂಧನೂರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿನ ಹೆಲಿಪ್ಯಾಡ್ಗೆ ಆಗಮಿಸಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಾಲೇಜು ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿರುವ ತಿಮ್ಮಾಪೂರ ಏತ ನೀರಾವರಿ ಯೋಜನೆ ಲೋಕಾರ್ಪಣೆ, ಜಲಜೀವನ್ ಮಿಷನ್ ಯೋಜನೆಗೆ ಶಂಕುಸ್ಥಾಪನೆ, ಸರ್ಕಾರಿ ಪದವಿ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಾಗೂ ಕರ್ನಾಟಕ ಸಂಭ್ರಮ-೫೦ರ ಪ್ರಯುಕ್ತ ಕನ್ನಡ ರಥ ಮೆರವಣಿಗೆಗೆ ಚಾಲನೆ ಮತ್ತು ಸಿಂಧನೂರ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುವರು.
ಬಳಿಕ ಮಧ್ಯಾಹ್ನ ೩ ಗಂಟೆಗೆ ಸಿಂಧನೂರ ಹೆಲಿಪ್ಯಾಡ್ನಿಂದ ನಿರ್ಗಮಿಸಿ ೩.೩೫ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್ಸ್ಟಿçಪ್ಗೆ ತೆರಳಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಆಗಿರುವ ಸರ್ಕಾರದ ಪದನಿಮಿತ್ತ ಅಪರ ಕಾರ್ಯದರ್ಶಿ ಕೆ ಚಿರಂಜೀವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.