ರಾಯಚೂರು ಸೆಪ್ಟೆಬರ್ 02.ಕೃಷಿ ವಿಜ್ಞಾನಗಳ ವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಬೆಂಗಳೂರು ಹಾಗೂ ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ರಾಯಚೂರು ಸಹಯೋಗದೊಂದಿಗೆ ‘ಅವಿಷ್ಕಾರಗಳು ನಾಳೆಯ ಮಾರುಕಟ್ಟೆಯ ಪ್ರವರ್ತಕಗಳು’ ಎಂಬ ಶೀರ್ಷಿಕೆಯಡಿಯಲ್ಲಿ ರಾಜ್ಯಮಟ್ಟದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ಸಮ್ಮೇಳನ ಕಾರ್ಯಕ್ರಮವನ್ನು ಸಣ್ಣ ಕೈಗಾರಿಕೆ ಸಚಿವರಾದ ಶರಣಬಸ್ಸಪ್ಪ ದರ್ಶನಾಪೂರು, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸುರಾಜು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಜಂಟಿಯಾಗಿ ದೀಪಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್, ಹಂಪಯ್ಯ ನಾಯಕ್, ಡಾ. ಶಿವರಾಜ್ ಪಾಟೀಲ್, ಚೇಂಬರ್ ಆಫ್ ಕಾಮರ್ಸ್ ನ ಬಿ ವಿ ಗೋಪಾಲ್ ರಡ್ಡಿ, ಜಿಲ್ಲಾದ್ಯಕ್ಷರಾದ ಎಸ್ ಕಮಲ್ ಕುಮಾರ್, ತ್ರಿವಿಕ್ರಮ್ ಜೋಷಿ, ಶರಣಗೌಡ ಬಯ್ಯಾಪೂರ್ ಸೇರಿದಂತೆ ಅನೇಕರು ವೇದಿಕೆಯಲ್ಲಿದ್ದರು.