ಏಪ್ರಿಲ್ 17. ಬಿಸಿಲು ನಾಡು ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಸಿಲುಗಿಂತ ಬಿಸಿಯಾಗಿ ರಾಜಕೀಯ ದಿನದಿಂದ ದಿನಕ್ಕೆ ರಂಗೇರುತ್ತಿದೆ ಜೆಡಿಎಸ್ ಪಕ್ಷದಿಂದ ಶ್ರೀ ವೆಂಕಟರಾವ್ ನಾಡಗೌಡರು ನಾನೇ ಮಂತ್ರಿ ನಾನೇ ರಾಜನೆಂದು ಭರ್ಜರಿ ಪ್ರಚಾರ ನಡೆಸಿದ್ದಾರೆ ಅದೇ ರೀತಿ ಬಿಜೆಪಿ ಪಕ್ಷದ ಕೆ ಕರಿಯಪ್ಪನವರು ಕೂಡ ನಗರ ಸೇರಿದಂತೆ ಹಳ್ಳಿಗಳಲ್ಲಿ ಪ್ರಚಾರದ ಬರಾಟೆಯಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಕಾರ್ಯಪ್ರವೃತ್ತರಾಗಿದ್ದಾರೆ.
ಕಾಂಗ್ರೆಸ್ ಮಾತ್ರ ಒಡೆದ ಮನೆಯಾಗಿದೆ ಮಾಜಿ ಶಾಸಕ ಶ್ರೀ ಹಂಪನಗೌಡ ಬಾದರ್ಲಿ ಅವರು ಹಲವು ದಿನಗಳಿಂದ ಟಿಕೆಟ್ ಗಾಗಿ ಜಿದ್ದಾಜಿದ್ದಿ ಪೈಪೋಟಿ ನಡೆಸಿ ಮೊಮ್ಮಗನ ವಿರುದ್ಧ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ಅದ್ದೂರಿಯಾಗಿ ಪ್ರಚಾರ ಮಾಡಿಕೊಂಡು ಬೇರೆ ಬೇರೆ ಪಕ್ಷದ ಕಾರ್ಯಕರ್ತರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಾ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಕಾಲಿಗೆ ಚಕ್ರ ಕಟ್ಟಿಕೊಂಡು ನವ ಯುವಕನಂತೆ ಓಡಾಡುತ್ತಿದ್ದಾರೆ.
ಯುವ ಕಾಂಗ್ರೆಸ್ ಮಾಜಿ ರಾಜ್ಯಾಧ್ಯಕ್ಷ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಬಸವನಗೌಡ ಬಾದರ್ಲಿ ಯವರು ಕಾಂಗ್ರೆಸ್ ಟಿಕೆಟ್ ಗಾಗಿ ತಾತನ ಜೊತೆ ಜಿದ್ದಾಜಿದ್ದಿ ನಡೆಸಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಈ ಹಿನ್ನಲೆಯಲ್ಲಿ ಅವರ ಕಾರ್ಯಕರ್ತರು ಅಭಿಮಾನಿಗಳು ಬೇಸರಗೊಂಡು ಕಾಂಗ್ರೆಸ್ ಹೈಕಮಾಂಡಿಗೆ ತಕ್ಕ ಪಾಠ ಕಲಿಸೋಣ ಆದ್ದರಿಂದ ನೀವು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಎಂದು ಒತ್ತಾಯದ ಮೇರೆಗೆ ಇಂದು ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ ಅದೇ ರೀತಿಯಾಗಿ ದಿನಾಂಕ 20.04.2023ರಂದು ಅದ್ದೂರಿಯಾಗಿ ವಿಜೃಂಭಣೆಯಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅವರ ಕಾರ್ಯಕರ್ತರು ಮತ್ತು ಅಭಿಮಾನಿಗಳು ತಿಳಿಸಿದ್ದಾರೆ.