ರಾಯಚೂರು,ಮಾ.29(ಕ.ವಾ):- ವಿಧಾನಸಭೆ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮಾ.29 ರಿಂದ ನೀತಿ ಸಂಹಿತೆ ಜಾರಿಯಾಗಿದ್ದು, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ, ನೀತಿ ಸಂಹಿತೆ ಉಲ್ಲಂಘನೆಯಾದರೆ ಸೂಕ್ತ ಕ್ರಮ ಕೈಗೊಳ್ಳುವ ಸಲುವಾಗಿ ಹಾಗೂ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಲ್.
ಚಂದ್ರಶೇಖರ ನಾಯಕ ಅವರು ಹೇಳಿದರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲೆಯ ರಾಯಚೂರು ನಗರ, ರಾಯಚೂರು ಗ್ರಾಮೀಣ, ಮಾನವಿ, ದೇವದುರ್ಗ, ಲಿಂಗಸುಗೂರು, ಸಿಂಧನೂರು ಹಾಗೂ ಮಸ್ಕಿ ಸೇರಿದಂತೆ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1840 ಮತಗಟ್ಟೆಗಳಿದ್ದು ಎಲ್ಲಾ ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಸಿದ್ದಪಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು