ರಾಯಚೂರು,ಏ.14(ಕವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಡಾ.ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಏ.14ರ(ಶುಕ್ರವಾರ) ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಅವರು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಇದಕ್ಕೂ ಮೊದಲು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಜನಿಕಾಂತ ಚೌಹಾಣ್, ರಾಯಚೂರು ತಹಶೀಲ್ದಾರ ಚನ್ನಮಲ್ಲಪ್ಪ ಗಂಟಿ, ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತೇದಾರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಜೇಂದ್ರ ಜಲ್ದಾರ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.