ಸಿಂಧನೂರು.ಡಿಸೆಂಬರ್ 19. ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆ ವತಿಯಿಂದ 2023-2024 ನೇ ವಿವಿಧ ಕ್ಷೇತ್ರಗಳ ಸಾಧನೆಗೈದಿರುವ ಸಾಧಕರಿಗೆ ದಿನಾಂಕ 23.12.2023 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವಂತ ರಾಜ್ಯಮಟ್ಟದ ಪತ್ರಕರ್ತರ ಕಾರ್ಯಗಾರ ಮತ್ತು ಪ್ರತಿಭಾ ಪುರಸ್ಕಾರ ಸಂಸ್ಕೃತಿಕ ಉತ್ಸವದಲ್ಲಿ ವಿವಿಧ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.
ಅದೇ ರೀತಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಪ್ರಮುಖವಾಗಿ ಕಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವಂತಹ ಡಾ. ಮಲ್ಲಿಕಾರ್ಜುನ್ ಕಮತಗಿ ಅವರನ್ನು ಗುರುತಿಸಿ ಕಲಾರತ್ನ ಎಂಬ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿ ಅವರನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಕಾರಣ ತಾವೆಲ್ಲರೂ ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ತಿಳಿಸಿದ್ದಾರೆ.