ಮೇ 20. ಸಿಂಧನೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಲು ಹೊಸಳ್ಳಿ ಇಜೆ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ 101 ಕಾಯಿ ಒಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು.
ರಾಜ್ಯದಲ್ಲಿ ಸರ್ಕಾರ ಒಂದು ಪಕ್ಷವಾದರೆ ಕ್ಷೇತ್ರದಲ್ಲಿ ಒಂದು ಪಕ್ಷದ ಶಾಸಕರು ಇರುತ್ತಿದ್ದರು ಹೀಗಾಗಿ ಈ ಭಾಗದ ಶಾಸಕರಿಗೆ ಇಲ್ಲಿಯವರೆಗೆ ಕೂಡ ಯಾವುದೇ ರೀತಿ ಸಚಿವ ಸ್ಥಾನ ನೀಡದೆ ಅನ್ಯಾಯವಾಗುತ್ತಿತ್ತು ಆದರೆ ಈಗ ರಾಜ್ಯದಲ್ಲಿ ಸರಕಾರ ಮತ್ತು ತಮ್ಮ ಕ್ಷೇತ್ರದಲ್ಲಿ ಶಾಸಕರು ಒಂದೇ ಪಕ್ಷವಾಗಿದ್ದು ಐದನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಈ ಭಾಗದ ಮೆಚ್ಚಿನ ನಾಯಕರಾದ ಶ್ರೀ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡಿಗೆ ಒತ್ತಾಯಿಸಿ ಜೊತೆಗೆ ಸಿಂಧನೂರು ತಾಲೂಕಿನ ಹೊಸಹಳ್ಳಿ ಇಜೆ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಹಂಪನಗೌಡ ಬಾದರ್ಲಿ ಅಭಿಮಾನಿ ಬಳಗದಿಂದ 101 ಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದರು.
ನಮ್ಮ ಸಿಂಧನೂರನ್ನು ಜಿಲ್ಲಾ ಕೇಂದ್ರ ಮಾಡಲು ಮುಂದಾಗಿರುವ ಶಾಸಕರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದರೆ, ಆಡಳಿತಾತ್ಮಕವಾಗಿ ನಮ್ಮ ಸಿಂಧನೂರು ಜಿಲ್ಲಾ ಕೇಂದ್ರ ಆಗಲು ಸಹಕಾರಿ ಆಗುತ್ತದೆ. ಅದೇ ರೀತಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ, ತಾಲೂಕಿಗೆ ಹೆಚ್ಚಿನ ಅನುದಾನ ತರುವಲ್ಲಿ ಸಫಲರಾಗುತ್ತಾರೆ ಎಂಬ ನಂಬಿಕೆಯಿದೆ ಎಂದು ಈ ಸಂದರ್ಭದಲ್ಲಿ ಹೊಸಳ್ಳಿ ಇಜೆ ಗ್ರಾಮದ ಹಂಪನಗೌಡ ಬಾದರ್ಲಿ ಅಭಿಮಾನಿ ಬಳಗದಿಂದ ವಿಶೇಷ ಪೂಜೆ ಸಲ್ಲಿಸಿ, ಸಚಿವ ಸ್ಥಾನ ನೀಡಲು ಅಭಿಮಾನಿಗಳು ಒತ್ತಾಯಿಸಿದರು.