ಆಂಧ್ರಪ್ರದೇಶ ನಂದ್ಯಾಲ ಸೆ.9ರ ಮಾಜಿ ಮುಖ್ಯಮಂತ್ರಿ, ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸೆ.9ರ ಶನಿವಾರ ಆಂಧ್ರಪ್ರದೇಶದ ನಂದ್ಯಾಲದಲ್ಲಿ ಬೆಳಗಿನಜಾವ ಸಿಐಡಿ (Crime Investigation Department) ಪೊಲೀಸರ ಬಂಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸ್ಕಿಲ್ ಡೆವಲಪ್ಮೆಂಟ್ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಮಾಡಿದ್ದು ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.