ರಾಯಚೂರು,ಏ.17(ಕವಾ):- ಮತದಾನವೆಂಬುವುದು ಪ್ರತಿಯೊಬ್ಬರು ಮೂಲಭೂತ ಹಕ್ಕಾಗಿದ್ದು, ವಿಶೇಷವಾಗಿ ವಿಶೇಷಚೇತನರು ಮತದಾನದ ಹಕ್ಕನ್ನು ಚಲಾಯಿಸುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಶಶಿಧರ ಕುರೇರ ಅವರು ಹೇಳಿದರು.
ಅವರು ಏ.17ರ(ಸೋಮವಾರ) ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ವಿಕಲಚೇತನರು ಹಾಗೂ ಹಿರಿಯ ನಾಗರೀಕರಿಗಾಗಿ ಚುನಾವಣಾ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯ ಪ್ರತಿಯೊಂದು ಮತಗಟ್ಟೆಗಳಲ್ಲಿ ವಿಶೇಷಚೇತನರಿಗಾಗಿ ರ್ಯಾಂಪ್ ವ್ಯವಸ್ಥೆ ಮಾಡಲಾಗಿದ್ದು, ಮತ್ತು ಅಂದ ಮತದಾರರಿಗಾಗಿ ಬ್ರೈನ್ ಲಿಪಿ(ಸ್ಪರ್ಶ ಲಿಪಿ)_ ವ್ಯವಸ್ಥೆಯನ್ನು ಮಾಡಲಾಗಿದೆ. ಇದಲ್ಲದೇ ಮತಗಟ್ಟೆಗೆ ಬರಲು ಆಗದ ವಿಶೇಷಚೇತನರು ಮತ್ತು ಹಿರಿಯ ನಾಗರೀಕರಿಗಾಗಿ ಅಂಚೆಮತದಾನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ವಾಕ್ ಮತ್ತು ಶ್ರವಣ ದೋಷವುಳ್ಳ ವಿಕಲಚೇತನ ಮತದಾರರಿಗೆ ಮತದಾನ ಕುರಿತು ಸನ್ನೆ ಭಾಷಯ ಮೂಲಕ ಚುನಾವಣೆ ಕುರಿತು ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಜನಿಕಾಂತ ಚೌಹಾಣ್, ತಹಶೀಲ್ದಾರ ಚನ್ನಮಲ್ಲಪ್ಪ ಗಂಟಿ, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಶರಣಬಸವ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.