ಮಾ. 29: ರಾಜ್ಯದಲ್ಲಿ ಚುನಾವಣೆ ಮುಹೂರ್ತ ಫಿಕ್ಸ್ ಮಾಡಿದ ಹಿನ್ನೆಲೆ ಹಲವು ದಿನಗಳಿಂದ ಕಾಂಗ್ರೆಸ್ ನಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ಮತ್ತು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ ಕರಿಯಪ್ಪನವರು ಕೂಡ ಟಿಕೆಟಿಗಾಗಿ ಪೈಪೋಟಿ ನಡೆಸಿದ್ದರು ಆದರೆ ಗಂಡ ಹೆಂಡತಿ ಜಗಳದಲ್ಲಿ ಮಗು ಬಡವಾಯಿತು ಅನ್ನುವ ಹಾಗೆ ನನ್ನ ಪರಿಸ್ಥಿತಿ ಆಗಬಾರದು ಎಂದು ತಾತ ಮೊಮ್ಮಗನಿಗೆ ಜಗಳ ಬಿಟ್ಟು ಇಂದು ಅಧಿಕೃತವಾಗಿ ಬಿಜೆಪಿ ಸೇರಲು ಬೆಂಗಳೂರಿಗೆ ಹೋಗಿದ್ದು ನನಗೆ ಟಿಕೆಟ್ ನೀಡುವುದಾಗಿ ನೀಡಿ ಖಚಿತಪಡಿಸಿದ್ದಾರೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಕಾಡ ಅಧ್ಯಕ್ಷರಾದ ಕೊಲ್ಲಾಶೇಸಿಗಿರಿ ರಾವ್ ಮತ್ತು ಇತರ ಹಿರಿಯ ಮುಖಂಡರ ನಮ್ಮ ನೂರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳ ನೇತೃತ್ವದಲ್ಲಿ ಇಂದು ಅಧಿಕೃತವಾಗಿ ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆ ಆಗಲಿದ್ದೇನೆ ಎಂದು ಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ಮಾಜಿ ಕೆಪಿಸಿಸಿ ಕಾರ್ಯದರ್ಶಿ ಕೆ ಕರಿಯಪ್ಪನವರು ಬಡವರ ಬಾರಕೋಲು ಪತ್ರಿಕೆ ಜೊತೆ ದೂರವಾಣಿ ಮೂಲಕ ಮಾತನಾಡಿ ಹೇಳಿದರು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆ.ಕರಿಯಪ್ಪ, 2018ರ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೂ ಕೆ ಟಿಕೆಟ್ ಸಿಕ್ಕಿರಲಿಲ್ಲ. ಈ ಬಾರಿಯೂ ಕಾಂಗ್ರೆಸ್ನಿಂದ ಟಿಕೆಟ್ ಗಿಟ್ಟಿಸಿಕೊಳ್ಳಲು ಹರಸಾಹಸ ಪಟ್ಟಿದ್ದರು. ಕಾಂಗ್ರೆಸ್ನಲ್ಲಿ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಮಧ್ಯೆ ಟಿಕೆಟ್ ಗೆ ಭಾರಿ ಪೈಪೋಟಿ ಇದೆ. ಸಚಿವ ಭೈರತಿ ಬಸವರಾಜು, ಕಾಡಾ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್ ಅವರು ಮುಖ್ಯಮಂತ್ರಿಗಳು ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದು, ಟಿಕೆಟ್ ಖಚಿತವಾಗಿದೆ ಎಂದು ಹೇಳಿದ್ದಾರೆ
ಹಾಗಾದರೆ ಯಾರಿಗೆ ಟಿಕೆಟ್: ವಿಧಾನಸಭಾ ಚುನಾವಣೆಗೆ ಬುಧವಾರ ಮೂಹೂರ್ತ ನಿಗದಿಯಾಗಿದ್ದು, ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ದಂಡೇ ಇದೆ. ಮಾಜಿ ಸಂಸದ, ಕೆಪಕ್ ನಿಗಮದ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ, ಕಾಡಾ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್, ಜಿ.ಪಂ.ಮಾಜಿ ಸದಸ್ಯ ಅಮರೇಗೌಡ ವಿರುಪಾಪುರ, ಜೊತೆಗೆ ಕೆ.ಮರಿಯಪ್ಪ, ರಾಜೇಶ ಹಿರೇಮಠ ಅವರ ಹೆಸರುಗಳು ಪ್ರಮುಖವಾಗಿ ಕೇಳಿ ಬಂದಿದ್ದವು ಆದರೆ ಈಗ ಟಿಕೆಟ್ ಕೆ ಕರಿಯಪ್ಪನವರಿಗೆ ಅಂದರೆ ಯಾರಿಗೆ ವರಿಷ್ಠರು ಮಣೆ ಹಾಕಲಿದ್ದಾರೆ ಎನ್ನುವದು ಕಾದು ನೋಡಬೇಕಿದೆ.