ಏಪ್ರಿಲ್ 14.ಬೆಳಗ್ಗೆ ತಾನೇ ಬೇಸರ ವ್ಯಕ್ತಪಡಿಸಿ ಬಿಜೆಪಿಗೆ ವಿದಾಯ ಹೇಳಿದ ಮಾಜಿ ಉಪ ಮುಖ್ಯಮಂತ್ರಿ ಶ್ರೀ ಲಕ್ಷ್ಮಣ ಸವದಿಯವರು ವಿಶೇಷ ವಿಮಾನ ದ ಮೂಲಕ ಬೆಂಗಳೂರಿಗೆ ಆಗಮಿಸಿದ ಸವದಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಣದೀಪ್ ಸುರಜಿವಾಲ ಇವರ ಸಮ್ಮುಖದಲ್ಲಿ ಹಲವಾರು ಸುತ್ತಿನಲ್ಲಿ ಮಾತುಕತೆ ನಡೆಸಿ ಕಾಂಗ್ರೆಸ್ ಸೇರ್ಪಡೆಗೆ ಸಕಲ ಸಿದ್ಧತೆ ನಡೆದಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.
ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚಿಸುತ್ತಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸೌದಿ ಹಲವಾರು ತಮ್ಮ ಡಿಮ್ಯಾಂಡುಗಳೊಂದಿಗೆ ಅವರ ಪುತ್ರ ಚಿದಾನಂದ ಸವದಿಗೆ ಅಥಣಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸೌದಿ ಅವರು ಇಂದು ಸಂಜೆ 4 ಗಂಟೆಗೆ ಬಿಜೆಪಿಗೆ ರಾಜೀನಾಮೆ ನೀಡಿ ನಮ್ಮ ಪಕ್ಷದ ಸಿದ್ಧಾಂತಗಳು ಮೆಚ್ಚಿಕೊಂಡು ನಾಲ್ಕೂವರೆಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.