ಬಡವರ ಬಾರುಕೋಲು ಸುದ್ದಿ
ಮಸ್ಕಿ : ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಿಂಧನೂರು ತಾಲೂಕಿನ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ತುರುವಿಹಾಳ ಘಟಕ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 23-9-2024 ರಿಂದ 22.10.2024 ರವರೆಗೆ ಕಾಲಾವಕಾಶ ನೀಡಲಾಗಿತ್ತು.
01
ಪ್ರಸ್ತುತ,ಅರ್ಜಿ ಸಲ್ಲಿಸುವ ಅವಧಿ ಮುಗಿದಿದ್ದು,ಅರ್ಜಿಗಳನ್ನು ಸಲ್ಲಿಸುವಲ್ಲಿ ಅರ್ಜಿದಾರರಿಗೆ ಹಲವು ತಾಂತ್ರಿಕ ಸಮಸ್ಯೆಗಳು ಉಂಟಾಗಿದ್ದರಿಂದ,ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಹಾಗೂ ಸಹಾಯಕಿಯ ಹುದ್ದೆಗಳಿಗೆ ಅಪೂರ್ಣ ಅರ್ಜಿಗಳನ್ನು ಸ್ವೀಕರಿಸಲಾಗಿದೆ.
2024ರ ಡಿಸೆಂಬರ್ 20 ರಂದು ಸರ್ಕಾರದಿಂದ ಹೊರಡಿಸಲಾಗಿರುವ ಆದೇಶದಲ್ಲಿ,ಅರ್ಜಿಯನ್ನು ಪೂರ್ತಿಗೊಳಿಸದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದ್ದು,ಅವರು 2024ರ ಡಿಸೆಂಬರ್ 26 ರಿಂದ 2025ರ ಜನವರಿ 5 ರವರೆಗೆ ತಮ್ಮ ಅರ್ಜಿಗಳನ್ನು ಪೂರ್ಣಗೊಳಿಸಲು ಅವಕಾಶ ನೀಡಲಾಗಿದೆ.
ಅರ್ಜಿದಾರರು ವೆಬ್ಸೈಟ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಿಂಧನೂರು ತಾಲೂಕಿನ ತುರುವಿಹಾಳ ಘಟಕದ
ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸುವಂತೆ ತುರುವಿಹಾಳ ಘಟಕ ಯೋಜನೆಯ
ಶಿಶು ಅಭಿವೃದ್ಧಿ ಅಧಿಕಾರಿ ಅಶೋಕ ಎಮ್.ರವರು ಪತ್ರಿಕೆಗೆ ತಿಳಿಸಿದ್ದಾರೆ.
ವರದಿ : ಎಚ್.ಕೆ.ಬಡಿಗೇರ್