ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದ ಒಳಗಡೆ ಅನಿರ್ದಿಷ್ಟ ಧರಣಿ

Advertisement
ಸಿಂಧನೂರು ಅ.15-ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ (ರಿ) ಬೆಂಗಳೂರು. ತಾಲ್ಲೂಕ ಸಮಿತಿ ಸಿಂಧನೂರು ವತಿಯಿಂದ ಕರ್ನಾಟ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆಯ ಅತಿಥಿ ಉಪನ್ಯಾಸಕರಿಗೆ ಶೈಕ್ಷಣಿಕ ವರ್ಷವಿಡೀ ಕಾರ್ಯ ಮತ್ತು ವೇತನ ನೀಡುವ ಹಾಗೂ ಸೇವಾ ಸಕ್ರಮಾತಿ ಮಾಡಿಕೊಳ್ಳುವ ಕುರಿತು ದಿನಾಂಕ 16-10-2023 ರಿಂದ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದ ಒಳಗಡೆ ಅನಿರ್ದಿಷ್ಟ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.........

ಕರ್ನಾಟಕ ‌ರಾಜ್ಯದಲ್ಲಿ 410ಕ್ಕಿಂತಲೂ ಅಧಿಕ ಪದವಿ ಕಾಲೇಜುಗಳಲ್ಲಿ 14000ಕ್ಕಿಂತಲೂ ಹೆಚ್ಚು ಅತಿಥಿ ಉಪನ್ಯಾಸಕರು ಕಳೆದ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇವೆ.ಆದರೆ ಕಳೆದ ಮೂರು ವರ್ಷಗಳಿಂದ ಆನ್ ಲೈನ್ ಕೌನ್ಸೆಲಿಂಗ್ ಮೂಲಕ ಆಯ್ಕೆ ಮಾಡಿಕೊಂಡು ವರ್ಷದಲ್ಲಿ ಹತ್ತು ತಿಂಗಳು ಸೇವೆಗೆ ಬಳಸಿಕೊಂಡು ನಂತರ ಬಿಡುಗಡೆ ಮಾಡುತ್ತಿದ್ದರು.ಆದರೆ ಈ ಶೈಕ್ಷಣಿಕ ಸಾಲಿನಲ್ಲಿ ಆಯ್ಕೆ ಮಾಡಿಕೊಂಡರೂ ಕರ್ತವ್ಯಕ್ಕೆ ಹಾಜರುಪಡಿಸಿಕೊಂಡು ಕೆಲಸ ಇಲ್ಲ ಸಂಬಳ ಇಲ್ಲ ಎಂದು ಇಲಾಖೆ ಹಾಗೂ ಪ್ರಾಂಶುಪಾಲರು ಹೇಳುತ್ತಿದ್ದಾರೆ. ಹಾಗಾಗಿ ಇದು ರಾಯಚೂರು, ಗುಲ್ಬರ್ಗ ಹಾಗೂ ಬಳ್ಳಾರಿ ವಿಶ್ವವಿದ್ಯಾಲಯಗಳಲ್ಲಿ ಸೇವೆ ಸಲ್ಲಿಸುವ ಹಾಗೂ ವಿಶೇಷವಾಗಿ ಕಲ್ಯಾಣ ಕರ್ನಾಟಕದಲ್ಲಿ ಸೇವೆ ಸಲ್ಲಿಸುವ ಅತಿಥಿ ಉಪನ್ಯಾಸಕರಿಗೆ ಅನ್ಯಾಯವಾಗುತ್ತಿದ್ದು ಇದನ್ನು ಸರಿಪಡಿಸಿ ಈ ಹಿಂದಿನ ಸಾಲಿನಲ್ಲಿ ಹೇಗೆ ಸೇವೆ ಮಾಡಲು ಅವಕಾಶ ನೀಡಲಾಗಿತ್ತೋ ಅದೇ ತರಹ ಅವಕಾಶ ಕಲ್ಪಿಸಿಕೊಡಬೇಕು ಮತ್ತು ಸರಿಪಡಿಸಿ ನ್ಯಾಯನೀಡಬೇಕೆಂದು ಈ ಮೂಲಕ ಮಾನ್ಯ ಮುಖ್ಯಮಂತ್ರಿ ಗಳಿಗೆ ಹಾಗೂ ಸಂಭಂದಿಸಿದ ಶಿಕ್ಷಣ ಮಂತ್ರಿಗಳಿಗೆ ಹಾಗೂ ಅಧಿಕಾರಿಗಳ ಅವಗಾಹನೆಗೆ ತರುತ್ತಿದ್ದೇವೆ.ಒಂದು ವೇಳೆ ಈ ಹಿಂದಿನ ಸಾಲಿನಲ್ಲಿರುವಂತೆ
ಸೇವೆ ಸಲ್ಲಿಸಲು ಅವಕಾಶ ನೀಡದಿದ್ದರೆ ಮುಂದಿನ ದಿನಗಳಲ್ಲಿ
ಪಾಲಕರು,ವಿದ್ಯಾರ್ಥಿಗಳನ್ನೊಳ
ಗೊಂಡು ಹೋರಾಟ ರೂಪಿಸಬೇಕಾಗುತ್ತದೆಂದು ಈ ಮೂಲಕ ತಮ್ಮ ಅವಗಾಹನೆಗೆ ತರುತ್ತಿದ್ದೇವೆ.

ಮುಂದುವರೆದು ಸರ್ಕಾರವು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಅತಿಥಿ ಉಪನ್ಯಾಸರನ್ನು ಸೇವಾ ಸಕ್ರಮಾತಿ ಮಾಡಬೇಕೆಂದು ಈ ಮೂಲಕ ಮನವಿ ಮಾಡುತ್ತಿದ್ದೇವೆ.

ಅತಿಥಿ ಉಪನ್ಯಾಸಕರ ಹಕ್ಕೊತ್ತಾಯಗಳು

1.ಈ ಹಿಂದಿನ ಶೈಕ್ಷಣಿಕ ಸಾಲಿನಂತೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸುವುದು.
2. ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವಾ ಖಾಯಮಾತಿ ಮಾಡಿಕೊಳ್ಳಬೇಕು
3.ಎಲ್ಲಾಅತಿಥಿ ಉಪನ್ಯಾಸಕರಿಗೆ ಆರೋಗ್ಯವಿಮೆ ನೀಡಬೇಕು
4.ಭವಿಷ್ಯನಿಧಿಯನ್ನು(PF) ನೀಡುವುದು
5.ಮಹಿಳಾ ಅತಿಥಿ ಉಪನ್ಯಾಸಕರಿಗೆ ಹೆರಿಗೆ ರಜೆ ಹಾಗೂ ವೇತನ ನೀಡುವುದು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್