ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕ್ಯತೆ ಮೆರೆದ ಮುಸ್ಲಿಂ ಮುಖಂಡ ಅಬ್ದುಲ್ ಕರೀಮ್ ಸಾಬ್

Advertisement
ಡಿಸೆಂಬರ್ 27.ಕವಿತಾಳ : ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮುಸ್ಲಿಂ ಮುಖಂಡ ಅಬ್ದುಲ್ ಕರೀಂ ಸಾಬ್ ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.ಪೂಜಾ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಬಂದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಬಿ.ಎ.ಕರೀಂಸಾಬ್‌ ಸ್ವತಃ ಊಟ ಬಡಿಸಿದರು. ಹೋಳಿಗೆ, ಚಪಾತಿ, ಪಲ್ಯ, ಹಸಿ ತರಕಾರಿ, ಚಿತ್ರಾನ್ನ , ಹಪ್ಪಳ , ಅನ್ನ ಸಾಂಬಾರು ಉಣಬಡಿಸಿದರು.
https://youtu.be/HVDbWgmakNs?si=JwcvkQjzfXZoQzBs

ಜಾತಿ ಎಣಿಸದೇ ಮಾನವಕುಲಕ್ಕೆ ಒಳಿತನ್ನು ಬಯಸುವುದು ಶ್ರೇಷ್ಠ ಎಂಬುದು ನನ್ನ ನಂಬಿಕೆ’

ಅಯ್ಯಪ್ಪ ಸ್ವಾಮಿ ಭಕ್ತರಾಗಲು ಯಾವುದೇ ಜಾತಿ, ಧರ್ಮದ ಭೇದವಿಲ್ಲ. ಹೀಗಾಗಿ ಕಳೆದ ನಾಲ್ಕು ವರ್ಷಗಳಿಂದ ಅಯ್ಯಪ್ಪಸ್ವಾಮಿ ಭಕ್ತರಿಗೆ ಮನೆಯಲ್ಲಿ ಭೋಜನ ವ್ಯವಸ್ಥೆ ಮಾಡುತ್ತಿದ್ದೇನೆ. ಧರ್ಮ, ಜಾತಿ ಎಣಿಸದೇ ಮಾನವಕುಲಕ್ಕೆ ಒಳಿತನ್ನು ಬಯಸುವುದು ಶ್ರೇಷ್ಠ ಎಂಬುದು ನನ್ನ ನಂಬಿಕೆ’ ಹಿಂದೂ-ಮುಸ್ಲಿಂ ಭಾವೈಕ್ಯತೆ ಪರಸ್ಪರ ಗೌರವ, ಸಾಮರಸ್ಯ ಮತ್ತು ಸಹೋದರತ್ವದೊಂದಿಗೆ ಬದುಕಬೇಕು ಧಾರ್ಮಿಕ ಆಚರಣೆಗಳ ಭಿನ್ನತೆಗಳ ನಡುವೆಯೂ ಹಬ್ಬಗಳಲ್ಲಿ ಭಾಗವಹಿಸುವುದು, ಒಟ್ಟಾಗಿ ಹಬ್ಬ ಆಚರಿಸುವುದು, ಪ್ರಾರ್ಥನಾ ಸ್ಥಳಗಳಿಗೆ ಭೇಟಿ ನೀಡಿ ಪರಸ್ಪರ ಒಳಿತಿಗಾಗಿ ಹಾರೈಸುವಂತಹ ಹಲವಾರು ನಿದರ್ಶನಗಳ ಮೂಲಕ ವ್ಯಕ್ತವಾಗುತ್ತದೆ, ಭಾರತದಂತಹ ದೇಶದಲ್ಲಿ ಇದು ಒಂದು ದೊಡ್ಡ ಶಕ್ತಿಯಾಗಿದೆ. ನಾವು ಪ್ರಸಾದ ವ್ಯವಸ್ಥೆ ಮಾಡುವುದು ಕುಟುಂಬದವರೆಲ್ಲ ಸೇವೆ ಮಾಡುವುದು ನಮ್ಮ ಮನಸ್ಸಿಗೆ ತೃಪ್ತಿ ಕೊಡುತ್ತದೆ ಎಂದು ಕರೀಂಸಾಬ್‌ ಹೇಳಿದರು...ಅಯ್ಯಪ್ಪ ಭಕ್ತರಿಗೆ ಯಾವುದೇ ಜಾತಿ, ಧರ್ಮದ ಭೇದ–ಭಾವ ಇಲ್ಲ. ಹಿಂದೂ, ಮುಸ್ಲಿಂ, ಕ್ರೈಸ್ತ ಹೀಗೆ ಯಾವುದೇ ಧರ್ಮದವರ ಮನೆಯಲ್ಲಿ ಪೂಜೆ ಮಾಡಲು ಮತ್ತು ಪ್ರಸಾದ ಸ್ವೀಕರಿಸಲು ಅವಕಾಶವಿದೆ. ಭಕ್ತಿಯಿಂದ ಆಹ್ವಾನ ನೀಡಿದರೆ ನಾವು ತಿರಸ್ಕರಿಸುವುದಿಲ್ಲ’ ಎಂದು ಗುರುಸ್ವಾಮಿ ಚನ್ನಯ್ಯ ಸ್ವಾಮಿ ತಿಳಿಸಿದರು..ಈ ಭಾಗದಲ್ಲಿ ಬಿ.ಎ.ಕರೀಂಸಾಬ್‌ ಅವರು ಸತತ ನಾಲ್ಕು ವರ್ಷಗಳಿಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು... ಈ ಪ್ರಸಾದ ವ್ಯವಸ್ಥೆಯ ಕಾರ್ಯಕ್ರಮದಲ್ಲಿ ಕವಿತಾಳ್ ಪೀಠದ ಎಲ್ಲಾ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು, ಬಿ ಅಬ್ದುಲ್ ಕರೀಮ್ ಸಾಬ್ ಅವರ ಕುಟುಂಬದವರಾದ ಎಂ ಎ ವಹಾಬ್ , ಇರ್ಫಾನ್ ಕೆ , ಮಹಮ್ಮದ್ ಕಲೀಮ್ , ಇನ್ನಿತರರು ಸೇವೆ ಸಲ್ಲಿಸಿದರು..
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ