ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಆರೋಗ್ಯದ ಮಹತ್ವ ಅರಿತುಕೊಳ್ಳಿ, ಹೆಮ್ಮೆಯಿಂದ ಮತದಾನ ಮಾಡಿ: ಧನರಾಜ

Advertisement
ರಾಯಚೂರು,ಏ.18(ಕವಾ):- ನರೇಗಾ ಕೂಲಿಕಾರರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು ಹಾಗೂ ದೇಶದ ಪ್ರತಿಯೊಬ್ಬ ಪ್ರಜೆಗೂ ನೀಡಲಾದ ವಿಶೇಷವಾದ ಮತದಾನದ ಹಕ್ಕನ್ನು ಮತದಾನ ಮಾಡುವ ಮೂಲಕ ಚಲಾಯಿಸಬೇಕೆಂದು ಐಇಸಿ ಸಂಯೋಜಕ ಧನರಾಜ ಅವರು ಹೇಳಿದರು.

ಅವರು ಏ.18ರ(ಮಂಗಳವಾರ) ತಾಲೂಕಿನ ಕೊತ್ತದೊಡ್ಡಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಂದಕಗಳು ತೆಗೆಯುವ ಕೂಲಿಕಾರರಿಗೆ, ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಮತದಾರರಿಗೆ ಮತದಾನದ ಮಹತ್ವವನ್ನು ಅರಿಯಲು ಸ್ವಿಪ್ ಚಟುವಟಿಕೆ ಮತ್ತು ಮಹಾತ್ಮ ಗಾಂಧಿ ನರೇಗಾ ಕೂಲಿಕಾರರಿಗೆ ಐಇಸಿ ಭಾಗವಾಗಿ ಉಚಿತ ಆರೋಗ್ಯ ತಪಾಸಣಾ ಕಾರ್ಯವನ್ನು ಉದ್ದೇಶಿಸಿ ಮಾತನಾಡಿದರು.



18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಗೆ ಮತ ಚಲಾಯಿಸುವ ಹಕ್ಕು ನೀಡಲಾಗಿದೆ. ಮೇ 10 ರಂದು ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಿ, ಮತದಾನದ ಮೂಲಕ ಜಿಲ್ಲೆಯ ವಾಗ್ದಾನವನ್ನು ಯಶಸ್ವಿಯಾಗಿ ಪೂರೈಸೋಣ ಎನ್ನುವುದರೊಂದಿಗೆ ಮತದಾನದ ಪ್ರತಿಜ್ಞಾ ವಿಧಿ ಭೋಧಿಸಲಾಯಿತು.



ಈ ಸಂದರ್ಭದಲ್ಲಿ ಪಿಡಿಒ ಮಹ್ಮದ್ ಜಹೀರ್, ಜಿಐಎಸ್ ಪರಿಣಿತ ಜಗದೀಶ್ ಆಪ್ತ ಸಮಾಲೋಚಕರ ಈರಣ್ಣ, ಐಸಿಟಿಸಿ ರಾಮಕೃಷ್ಣ, ಸಿಹೆಚ್‍ಒ ಅನೀಲ್ ಸ್ವಾಮಿ, ಕೆಹೆಚ್‍ಟಿಪಿ ಮಾರೆಪ್ಪ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಮತ್ತು ನರೇಗಾ ಮೇಟ್ ಕೂಲಿಕಾರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ