ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ಆರೋಗ್ಯದ ಬಗ್ಗೆ ಕೂಲಿಕಾರರಿಗೆ ಇರಲಿ ಹೆಚ್ಚಿನ ಕಾಳಜಿ: ರಾಜೇಂದ್ರ ಕುಮಾರ

Advertisement
ರಾಯಚೂರು,ಮೇ.22 ನರೇಗಾ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡುವುದಲ್ಲದೇ, ಅವರ ಆರೋಗ್ಯವನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಸಿರವಾರ ತಾ.ಪಂ.ಐಇಸಿ ಸಂಯೋಜಕ ರಾಜೇಂದ್ರ ಕುಮಾರ ಹೇಳಿದರು.

ಜಿಲ್ಲೆಯ ಸಿರವಾರ ತಾಲೂಕಿನ ಚಾಗಬಾವಿ ಗ್ರಾಮ ಪಂಚಾಯತಿಯ ಕಡದಿನ್ನಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿಯಲ್ಲಿ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ವತಿಯಿಂದ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆಗೆ ಚಾಲನೆ ನೀಡಲಾಯಿತು.



ಜೊತೆಗೆ ನರೇಗಾ ಯೋಜನೆಯಡಿ ಈ ವರ್ಷ ಕೂಲಿ ಹಣವನ್ನು ಹೆಚ್ಚಿಸಲಾಗಿದೆ. ತಾಂತ್ರಿಕ ಸಹಾಯಕರು ನಿಮಗೆ ನೀಡಿದ ಆಳತೆಗನುಸಾರವಾಗಿ ನೀವು ಕೆಲಸ ಮಾಡಿದಾಗ ನಿಮಗೆ ಪೂರ್ತಿ ಕೂಲಿ ಹಣ ದೊರೆಯಲಿದೆ. ಕಡ್ಡಾಯವಾಗಿ ಎಲ್ಲರೂ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಲು ತಿಳಿಸಿದರು.

ನಂತರ ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೂಲಿಕಾರರ ಆರೋಗ್ಯ ತಪಾಸಣೆಯನ್ನು ಮಾಡಿದರು. ಈ ವೇಳೆ ಬಿಪಿ, ಶುಗರ್ ಸೇರಿದಂತೆ ಕೆಮ್ಮು, ನೆಗಡಿ, ಜ್ವರ ಸೇರಿದಂತೆ ಹಲವು ಕಾಯಿಲೆಗಳ ತಪಾಸಣೆ ನಡೆಸಿ, ಮಾತ್ರೆಗಳನ್ನು ವಿತರಿಸಿದರು.

ಗ್ರಾ.ಪಂ.ಸದಸ್ಯ ವೀರೇಶ, ಸಮುದಾಯ ಆರೋಗ್ಯ ಅಧಿಕಾರಿ ನಾಗೇಂದ್ರ ಹಾಗೂ ತಾಲೂಕು ಸಂಯೋಜಕ ಬಾವಾಸಾಬ್, ಜಿಕೆಎಂ ಶಿವಲೀಲಾ, ಮೇಟ್ ಹಾಗೂ ಕೂಲಿಕಾರರು ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ